News Karnataka Kannada
Monday, April 22 2024
Cricket
ಕಲಬುರಗಿ

ಬಹುಪಾಲು ತೆರಿಗೆ ಪಡೆದು ರಾಜ್ಯದ ಪಾಲಿನ ತೆರಿಗೆ ನೀಡುವಲ್ಲಿ ಅನ್ಯಾಯ: ದಿನೇಶ ಗುಂಡೂರಾವ್

ರಾಜ್ಯದಿಂದ ಬಹುಪಾಲು ತೆರಿಗೆ ಪಡೆಯುವ ಕೇಂದ್ರ ಸರಕಾರ ರಾಜ್ಯದ ಪಾಲಿನ ತೆರಿಗೆ ನೀಡುತ್ತಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Photo Credit : News Kannada

ಕಲಬುರಗಿ: ರಾಜ್ಯದಿಂದ ಬಹುಪಾಲು ತೆರಿಗೆ ಪಡೆಯುವ ಕೇಂದ್ರ ಸರಕಾರ ರಾಜ್ಯದ ಪಾಲಿನ ತೆರಿಗೆ ನೀಡುತ್ತಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುರುವಾರ ಕಲಬುರಗಿ ನಗರದ ನವೀಕೃತ ಶರಬಸವೇಶ್ವರ ಕೆರೆಯ ಸಾರ್ವಜನಿಕ ಉದ್ಯಾನವನ ಉದ್ಘಾಟನೆಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಾಲಿನ ತೆರಿಗೆ ಹಣ ನೀಡದೆ ಕೇಂದ್ರ ಸರಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಭೀಕರ ಬರಗಾಲವಿದೆ. ಅನ್ನದಾತ ಸಂಕಷ್ಟದಲ್ಲಿದ್ದಾನೆ. ಬರಗಾಲ ಪರಿಹಾರ ಹಣ ಸಹ ಬಿಡುಗಡೆ ಮಾಡುತ್ತಿಲ್ಲ. ನರೇಗಾ ಕೂಲಿ ದಿನ ಹೆಚ್ಚಿಸುತ್ತಿಲ್ಲ. ಹಲವಾರು ಬಾರಿ ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ರು ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು