News Karnataka Kannada
Saturday, May 18 2024
ಕಲಬುರಗಿ

ನಿಂತಿದ್ದ 2 ಖಾಸಗಿ ಬಸ್​ಗಳಿಗೆ ಬೆಂಕಿ ತಗುಲಿ ಸುಟ್ಟು ಕರಕಲು

Two private buses caught fire
Photo Credit : News Kannada

ಕಲಬುರಗಿ: ಖಾಸಗಿ ಕಂಪನಿಗೆ ಸೇರಿದ ಎರಡು ಸ್ಲೀಪರ್ ಬಸ್​ಗಳಿಗೆ ಬೆಂಕಿ ತಗುಲಿ ಧಗಧಗಿಸಿ ಸುಟ್ಟು ಕರಗಲಾದ ಘಟನೆ ಕಲಬುರಗಿ ನಗರದ ಹಾಗರಗಾ ರಸ್ತೆಯ ಮಹೆಫಿಲ್​ ಎ ಖಾಸ್ ಡಾಬಾದ ಬಳಿ ಶನಿವಾರ ನಡೆದಿದೆ.

ಅಕ್ಕಪಕ್ಕದಲ್ಲಿ ನಿಂತಿದ್ದ ಎರಡು ಬಸ್​ಗಳು ಬೆಂಕಿಯ ಕೆನ್ನಾಲೆಗೆಯಿಂದ ಸಂಪೂರ್ಣ ಸುಟ್ಟು ಕರಕಲಾಗಿವೆ. ಹೀಗಾಗಿ ದಟ್ಟವಾದ ಹೊಗೆ ಆವರಿಸಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ನಂತರ ಅಗ್ನಿ ಶಾಮಕ ದಳದ ಸಿಬ್ಬಂದಿ ಘಟನಾ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸುವ ಮೂಲಕ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

ನಗರದ ಹಾಗರಗಾ ರಸ್ತೆಯ ಮಹೆಫಿಲ್ ಎ ಖಾಸ್ ಡಾಬಾದ ಹತ್ತಿರದ ಮೈದಾನದಲ್ಲಿ ಕಳೆದ ನಾಲ್ಕು ತಿಂಗಳಿಂದ ಒಂದೇ ಕಡೆಯಲ್ಲಿ ಎರಡು ಸ್ಲೀಪರ್​ ಬಸ್​ಗಳು ನಿಂತಿದ್ದವು ಎಂದು ತಿಳಿದುಬಂದಿದೆ. ಡಿಸಿಪಿ ಕನಿಕಾ ಶೆಕ್ರೀವಾಲ್, ಎಸಿಪಿ ರಾಜಣ್ಣ ಸೇರಿದಂತೆ ಪೊಲೀಸ್ ಅಧಿಕಾರಿಗಳು‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಕಲಬುರಗಿ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು