News Karnataka Kannada
Tuesday, April 30 2024
ಕಲಬುರಗಿ

ಇಂಡಿಯಾ ಮೈತ್ರಿಕೂಟದ ಒಗ್ಗಟ್ಟಿಗೆ ಶ್ರಮಿಸುತ್ತೇವೆ: ಮಲ್ಲಿಕಾರ್ಜುನ ಖರ್ಗೆ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿದ ವಿಚಾರವಾಗಿ  ಗ್ರಾಮೀಣಾಭಿವೃದ್ಧಿ, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ಪಕ್ಷದಿಂದ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ದೂರು ಸಲ್ಲಿಸಲಾಗಿದೆ.
Photo Credit : News Kannada

ಕಲಬುರಗಿ: ಕಲಬುರಗಿ ವಿಮಾನ ನಿಲ್ದಾಣದಲ್ಲಿ ಶನಿವಾರ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂಡಿಯಾ ಮೈತ್ರಿಕೂಟ  ಒಟ್ಟಾಗಿರಲು ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಅವರು, ಮೈತ್ರಿಕೂಟವು ಒಗ್ಗಟ್ಟು ಕಾಯ್ದುಕೊಳ್ಳುವ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸೇರಿದಂತೆ ಎಲ್ಲರಿಗೂ ಪತ್ರ ಬರೆದಿದ್ದೇ‌ನೆ. ಹೀಗಾಗಿ ಇನ್ನು ಆ ವಿಚಾರದ ಬಗ್ಗೆ ಈಗ ಹೇಳಿಕೆ ಕೊಟ್ಟರೆ ಗೊಂದಲ ಆಗುತ್ತದೆ ಎಂದು ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ಜತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತುಕತೆ ನಡೆಸಿದ್ದಾರೆ ಎಂಬ ವಿಚಾರ ಶುಕ್ರವಾರ ಬಹಿರಂಗವಾಗಿತ್ತು.

ಭಾನುವಾರ ಡೆಹ್ರಾಡೂನ್​​ಗೆ ಹೋಗಿ ಮಾಹಿತಿ ಪಡೆದುಕೊಂಡು ನಂತರ ಮಾತನಾಡುತ್ತೇನೆ. ಇಂಡಿಯಾ ಒಕ್ಕೂಟದಿಂದ ಎಲ್ಲರೂ ಸ್ಪರ್ಧೆ ಮಾಡಿದರೆ ಒಳ್ಳೆಯದಾಗಲಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡುವ ಬಗ್ಗೆ ಮಾಹಿತಿಯಿಲ್ಲ. ಅವರು ರಾಜ್ಯಪಾಲರನ್ನು ಭೇಟಿಯಾಗಿದ್ದಾರೋ ಇಲ್ಲವೋ ಗೊತ್ತಿಲ್ಲ. ಪ್ರಜಾಪ್ರಭುತ್ವ ಉಳಿಯಬೇಕಾದರೆ ನಾವು ಒಗ್ಗಟ್ಟಾಗಿರಬೇಕು. ಆ ನಿಟ್ಟಿನಲ್ಲಿ ನಮ್ಮ ಪ್ರಯತ್ನ ಮುಂದುವರಿದಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಜೆಡಿಯು ಮತ್ತು ಬಿಜೆಪಿ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು