ಕಲಬುರಗಿ: ತೋಳವೊಂದು ಗ್ರಾಮಕ್ಕೆ ಎಂಟ್ರಿ ಕೊಟ್ಟು 8 ಜನರ ಮೇಲೆ ದಾಳಿ ಮಾಡಿರುವ ಘಟನೆ ಕಲಬುರಗಿಯ ಆಳಂದ ತಾಲೂಕಿನ ಚಲಗೇರ ಗ್ರಾಮದಲ್ಲಿ ನಡೆದಿದೆ.
ತೋಳ ಶರಣಪ್ಪ ಶಿವ ಗುಂಡ ಜಮಾದಾರ, ಶರಣಪ್ಪ ಜಟ್ಟೆಪ್ಪ ಜಮಾದಾರ ಹಾಗೂ ಅನಸುಬಾಯಿ ಮಾರುತಿ ಮುಗಳಿ, ನೀಲಪ್ಪ ಹಾಲೋಳ್ಳಿ, ಮಲ್ಲಪ್ಪ ದತ್ತಣ್ಣ ಜಮಾದಾರ ಮತ್ತು ಸುನೀಲ್ ಮುಲಗೆ, ಶರಣಪ್ಪ ಹಣಮಂತರಾವ ದಿಂಡುರೆ ಎಂಬುವವರ ಮೇಲೆ ದಾಳಿ ನಡೆಸಿದೆ. ಘಟನೆಯಲ್ಲಿ ಶರಣಪ್ಪ ಗುರಣ್ಣ ಧಲ್ಲು ಎಂಬುವವರಿಗೆ ತೀವ್ರ ಗಾಯವಾಗಿದೆ.
ದಾಳಿ ಬಳಿಕ ನಾಲ್ವರಿಗೆ ಆಳಂದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಗಂಭೀರ ಗಾಯಗೊಂಡವರಿಗೆ ಸೊಲ್ಲಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಶು ವೈದ್ಯರು ಮತ್ತು ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.