News Karnataka Kannada
Monday, May 13 2024
ಕಲಬುರಗಿ

ಕಲಬುರಗಿ: 70 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿದ ಯುವಕ ಬಂಧನ

Man arrested for assaulting woman in Goa resort
Photo Credit : IANS

ಕಲಬುರಗಿ, ನ.8: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಅಣ್ಣೂರು ಗ್ರಾಮದಲ್ಲಿ 70 ವರ್ಷದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 28 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಯುವಕ ಸಂತೋಷ್, ವೃದ್ಧೆಯ ನೆರೆಮನೆಯವನು. ಲಡಮುಗುಲಿ ಗ್ರಾಮದ ನಿವಾಸಿಯಾದ ಸಂತ್ರಸ್ತೆ ತನ್ನ ಮೊಮ್ಮಗಳೊಂದಿಗೆ ವಾಸಿಸಲು ಬಂದಿದ್ದಳು.

ಪೊಲೀಸರ ಪ್ರಕಾರ, ಆರೋಪಿ ಸಂತೋಷ್ ಮನೆಯೊಳಗೆ ನುಸುಳಿ ಅಪರಾಧ ಮಾಡಿದಾಗ ಮಹಿಳೆ ಮನೆಯಲ್ಲಿ ಒಬ್ಬಳೇ ಇದ್ದಳು.

ಮೊಮ್ಮಗಳು ಮನೆಗೆ ಮರಳಿದಾಗ ಆರೋಪಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಸಂತ್ರಸ್ತೆಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಆಕೆಯ ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಸಿದ್ದು, ಆರೋಪಿ ಸಂತೋಷ್ ನನ್ನು ಬಂಧಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು