News Karnataka Kannada
Sunday, April 14 2024
Cricket
ಕಲಬುರಗಿ

ಚುನಾವಣೆಯಲ್ಲಿ ಸ್ಪರ್ಧಿಸುವ ಇಚ್ಛೆ ಇಲ್ಲ, ಒತ್ತಡ ಹೇರಿದರೆ ನೋಡೋಣ : ಖರ್ಗೆ

ಕಾಂಗ್ರೆಸ್‌ನ ಹಿರಿಯ ನಾಯಕರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದಾರೆ ಎಂಬ ವರದಿಗಳನ್ನು ತಳ್ಳಿಹಾಕಿರುವ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾರ್ಯಕರ್ತರು ಸ್ಪರ್ಧಿಸುವಂತೆ ಕೇಳಿದರೆ ನಾನೂ ಕೂಡ ಸ್ಪರ್ಧಿಸುವ ಇಚ್ಛೆ ತೋರಬಹುದು ಎಂದಿದ್ದಾರೆ.
Photo Credit : News Kannada

ಕಲಬುರಗಿ: ಕಾಂಗ್ರೆಸ್‌ನ ಹಿರಿಯ ನಾಯಕರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದಾರೆ ಎಂಬ ವರದಿಗಳನ್ನು ತಳ್ಳಿಹಾಕಿರುವ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾರ್ಯಕರ್ತರು ಸ್ಪರ್ಧಿಸುವಂತೆ ಕೇಳಿದರೆ ನಾನೂ ಕೂಡ ಸ್ಪರ್ಧಿಸುವ ಇಚ್ಛೆ ತೋರಬಹುದು ಎಂದಿದ್ದಾರೆ.

ಆದರೆ ವಯಸ್ಸಿನ ಕಾರಣದಿಂದ ಈ ಬಾರಿ ಲೋಕಸಭೆ ಚುನಾವಣಾ ಕಣಕ್ಕೆ ತಾವು ಇಳಿಯದಿರಬಹುದು ಎಂದು ಕೂಡ ಹೇಳಿದ್ದಾರೆ. ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಕಲಬುರಗಿ ಕ್ಷೇತ್ರದಿಂದ 2009 ರಿಂದ ಲೋಕಸಭಾ ಸದಸ್ಯರಾಗಿದ್ದು ಕಳೆದ 2019ರ ಲೋಕಸಭೆ ಚುನಾವಣೆಯಲ್ಲಿ ಸೋತಿದ್ದರು.

ಹಿರಿಯ ನಾಯಕರು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದರಿಂದ ಹಿಂದೆ ಸರಿಯುತ್ತಿದ್ದಾರೆ ಎಂಬ ವರದಿಗಳ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಖರ್ಗೆ, “ನಾವು ಹಿಂದೆ ಸರಿಯುತ್ತಿರುವುದು ತಪ್ಪು. ನನಗೀಗ 83 ವರ್ಷ, ನೀವು ಪತ್ರಕರ್ತರು 65 ವರ್ಷಕ್ಕೇ ನಿವೃತ್ತರಾಗುವುದಿಲ್ಲವೇ, ಈಗ ಹೇಳಿ ನನಗೆ ಈಗ 83 ವರ್ಷ” ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು