ಕೊಪ್ಪಳ

ಕರೋನಾ ಮೂರನೆಯ ಅಲೆಯ ಭೀತಿ :ಜಿಲ್ಲೆಯ ಒಂದೊಂದೇ ದೇವಸ್ಥಾನ ಪ್ರವೇಶ ನಿರ್ಬಂಧ

ಕೊಪ್ಪಳ : ರಾಜ್ಯದಲ್ಲಿ ಕರೋನಾ ಮೂರನೆಯ ಅಲೆಯ ಭೀತಿ ಎದುರಾಗಿದೆ. ಈಗಾಗಲೇರಾಜ್ಯ ಸರ್ಕಾರ  ಈ ಬಗ್ಗೆ ಮುನ್ನೆಚ್ಚರಿಕೆ ವಹಿಸಲಾಗಿದ್ದು, ಹಲವು ಜಿಲ್ಲೆಗಳಲ್ಲಿ ನಿರ್ಬಂಧ ಮತ್ತೆ ಜಾರಿಯಾಗಿದೆ. ಈ ಮಧ್ಯೆ ಕೊಪ್ಪಳ ಜಿಲ್ಲೆಯ ಒಂದೊಂದೇ ದೇವಸ್ಥಾನಗಳಲ್ಲಿ  ಭಕ್ತರಿಗೆ  ನಿರ್ಬಂಧ ಹೇರಾಲಾಗುತ್ತಿದೆ .

ಕಣ್ಣಿದ್ದವರು ಕನಕಗಿರಿ ನೋಡಬೇಕು, ಕಾಲಿದ್ದವರು ಹಂಪಿ ನೋಡಬೇಕೆಂಬ ನಾಣ್ನುಡಿ ಹೊಂದಿರುವ ಕೊಪ್ಪಳ ಜಿಲ್ಲೆಯ ಕನಕಗಿರಿಯ ಶ್ರೀ ಕನಕಾಚಲಪತಿ ದೇವಸ್ಥಾನವು ಆಗಸ್ಟ್‌ 4ರಿಂದ ಆಗಸ್ಟ್‌ 18ವರೆಗೆ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ಕನಕಗಿರಿ ಕನಕಾಚಪಲಪತಿ ದೇವಸ್ಥಾನಕ್ಕೆ ಪ್ರವಾಸಿಗರು, ಭಕ್ತರು ಆಗಮಿಸುತ್ತಾರೆ, ಈಗ ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೊರೊನಾ ಸ್ಪೋಟವಾಗುತ್ತಿರುವ ಹಿನ್ನಲೆಯಲ್ಲಿ ಕನಕರಾಯನ ಗುಡಿಯನ್ನು ಬಂದ್ ಮಾಡಲು ಸಹಾಯಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಕೇರಳದಲ್ಲಿ ಒಂದೇ ದಿನ 23,676 ಮಂದಿಗೆ ಕೋವಿಡ್ ಸೋಂಕು: 2 ತಿಂಗಳಲ್ಲಿಯೇ ರಾಜ್ಯವೊಂದರಲ್ಲಿ ಗರಿಷ್ಠ ಪ್ರಕರಣ

ಈಗಾಗಲೇ ಜಿಲ್ಲೆಯ ಅಂಜನಾದ್ರಿ, ಹುಲಿಗಿಯ ಹುಲಿಗೆಮ್ಮ ದೇವಸ್ಥಾನ, ತುಂಗಭದ್ರಾ, ಪಂಪಾವನಕ್ಕೆ ಪ್ರವಾಸಿಗರು, ಭಕ್ತರು ಆಗಮಿಸುವದನ್ನು ನಿರ್ಬಂಧಿಸಲಾಗಿದೆ. ಇದೇ ನಿಟ್ಟಿನಲ್ಲಿ ಈಗ ಕನಕಗಿರಿ ದೇವಸ್ಥಾನಕ್ಕೂ ನಿರ್ಬಂಧ ಹೇರಲಾಗಿದೆ, ಭಕ್ತರಿಗೆ ಮಾತ್ರ ಪ್ರವೇಶ ನಿರ್ಬಂಧಿಸಿದ್ದು ದೇವಸ್ಥಾನದಲ್ಲಿ ನಿತ್ಯ ಪೂಜೆಗೆ ಅವಕಾಶ ನೀಡಲಾಗಿದೆ, ದೇವಸ್ಥಾನ ಆಡಳಿತ, ಅರ್ಚಕರಿಗೆ ಮಾತ್ರ ಅವಕಾಶ ನೀಡಲಾಗಿದೆ. ಕೊರೊನಾ ತಡೆಗಾಗಿ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ.

Raksha Deshpande

Recent Posts

‘ಜಂಟಿ ಸರ್ವೆ ಆಗುವ ತನಕ ಹಿರೀಕಾಟಿಯಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸದಿದ್ದರೆ ಉಗ್ರ ಹೋರಾಟ’

ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದ ಸರ್ವೆ ನಂ. 108 ರಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದವರಿಗೆ ಸೇರಿದ 2 ಎಕರೆ…

4 mins ago

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸಿಬ್ಬಂದಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ಕೆಲಸದ ವಿಚಾರವಾಗಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

11 mins ago

ದುರಸ್ತಿ ಮಾಡಿ ವಾರ ಕಳೆಯುವ ಮೊದಲೇ ಕಿತ್ತು ಬಂದ ರಸ್ತೆ

ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…

18 mins ago

ಬಿರುಗಾಳಿ ಸಹಿತ ಮಳೆಗೆ ಕಬ್ಬಿಣದ ಬಸವ ಮಹಾದ್ವಾರ ಕುಸಿತ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

31 mins ago

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

35 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

50 mins ago