ಕುಷ್ಟಗಿ: ತಾಲ್ಲೂಕಿನ ಕೆ.ಬೋದೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಗಿನ ಜಾವ ಕುರಿಗಳನ್ನು ಸಾಗಿಸುತ್ತಿದ್ದ ಲಾರಿ ಉರುಳಿ ಬಿದ್ದು ನೂರಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ.ಕುರಿಗಳನ್ನು ಸಾಗಿಸುತ್ತಿದ್ದ ಲಾರಿಯು ಸೊಲ್ಲಾಪುರದಿಂದ ಬೆಂಗಳೂರಿಗೆ ಹೊರಟಿತ್ತು.
ಮದ್ಯದ ಪೆಟ್ಟಿಗೆಗಳನ್ನು ಸಾಗಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕುರಿಗಳ ತುಂಬಿದ್ದ ಲಾರಿಯು ರಸ್ತೆ ವಿಭಜಕ ದಾಟಿ, ಹೆದ್ದಾರಿ ಪಕ್ಕದ ಗುಂಡಿಯಲ್ಲಿ ಬಿತ್ತು. 413 ಪೈಕಿ 106 ಕುರಿಗಳು ಸಾವನ್ನಪ್ಪಿವೆ. ನೂರಾರು ಕುರಿಗಳು ಗಾಯಗೊಂಡಿವೆ ಎಂದು ಮೂಲಗಳು ತಿಳಿಸಿವೆ