News Karnataka Kannada
Monday, May 06 2024
ಕೊಪ್ಪಳ

ಕೊಪ್ಪಳದಲ್ಲಿʼ ಮದುವೆ ನಿಶ್ಚಿತಾರ್ಥಕ್ಕೆ ತೆರಳಿದ್ದ ಟ್ರ್ಯಾಕ್ಟರ್ ಪಲ್ಟಿʼ

Accident
Photo Credit : News Kannada

ಕೊಪ್ಪಳ: ಕನಕಗಿರಿ ತಾಲೂಕು ನವಲಿ ಗ್ರಾಮದ ರೈಸ್ ಟೆಕ್ನಾಲಜಿ ಪಾರ್ಕ್ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ.

ಕಾರಟಗಿಯ ಯುವಕನಿಗೆ ಮದುವೆ ನಿಶ್ಚಯ ಮಾಡಲೆಂದು ಕಾರಟಗಿಯಿಂದ ಕನಕಗಿರಿಯ ಶಿರವಾರ ಗ್ರಾಮಕ್ಕೆ ಟ್ರ್ಯಾಕ್ಟರ್​ನಲ್ಲಿ 15ಕ್ಕೂ ಹೆಚ್ಚು ಮಂದಿ ತೆರಳುತ್ತಿದ್ದರು.

ಕಾರಟಗಿ ಪಟ್ಟಣದ ಇಂದಿರಾನಗರದ ಯಮನೂರಪ್ಪ ಸಿಂಧನೂರು(55) ಮತ್ತು ತಿಪ್ಪಮ್ಮ (45) ಮೃತ ದುರ್ದೈವಿಗಳು.

ಮಾರ್ಗಮಧ್ಯೆ ನವಲಿಯ ರೈಸ್ ಟೆಕ್ನಾಲಜಿ ‌ಪಾರ್ಕ್ ಬಳಿ ಟ್ರ್ಯಾಕ್ಟರ್​ ಪಲ್ಟಿಯಾಗಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಕಾರಟಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ಸೇರಿದಂತೆ ಕನಕಗಿರಿ ಪೊಲೀಸ​ರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು