ಕೊಪ್ಪಳ : ಕೊಪ್ಪಳ ಜಿಲ್ಲೆಯ 9 ಶಾಲೆಗಳ 73 ವಿದ್ಯಾರ್ಥಿಗಳು, 6 ಶಿಕ್ಷಕರು, ಓರ್ವ ಅಡುಗೆ ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.ಕೊಪ್ಪಳ ತಾಲೂಕಿನ ಶಿವಪುರದ ಪ್ರಾಥಮಿಕ ಶಾಲೆ,ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ನರಸಾಪೂರ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆ, ಮರಳಿಯ ಹಿರಿಯ ಪ್ರಾಥಮಿಕ ಶಾಲೆ, ಕುಷ್ಟಗಿ ತಾಲೂಕಿನ ಹನುಮಸಾಗರ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಸೇರಿದಂತೆ ಒಟ್ಟು ಜಿಲ್ಲೆಯಲ್ಲಿ 9 ಶಾಲೆಗಳಲ್ಲಿ 73 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.