News Karnataka Kannada
Monday, April 29 2024
ಕೊಪ್ಪಳ

ಕೊಪ್ಪಳ  : ಪ್ರಿಯಕರ ನಿಂದಲೇ ಹತ್ಯೆಯಾದ ಮಹಿಳೆ

Untitled 181
Photo Credit :

ಕುಷ್ಟಗಿ: ತಾಲೂಕಿನ ಯಲಬುರ್ತಿ ಗ್ರಾಮದ ವ್ಯಕ್ತಿಯೊಬ್ಬ ತನ್ನ ಜತೆಗೆ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯೊಬ್ಬಳನ್ನು ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಶನಿವಾರ ರಾತ್ರಿ ಘಟನೆಗೆ ಸಂಬಂಧಿಸಿದಂತೆ ಗ್ರಾಮದ ಹಳ್ಳವೊಂದರಲ್ಲಿ ಶರಣವ್ವ ಶರಣಪ್ಪ ಮ್ಯಾಗೇರಿಯ (35) ಶವ ಪತ್ತೆಯಾಗಿದೆ.

ಗ್ರಾಮದ ಬಸವರಾಜ ತಟ್ಟಿ(40) ಈ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ. ನನ್ನ ಪತ್ನಿ ಮತ್ತು ಬಸವರಾಜ ಅನೈತಿಕ ಸಂಬಂಧ ಹೊಂದಿದ್ದರು. ಇದನ್ನು ನಾನು ನೋಡಿದ್ದು ತಿಳಿದು,

ನನ್ನ ಪತ್ನಿ ಮನೆಯಿಂದ ರಾತ್ರಿ ಓಡಿ ಹೋಗಿದ್ದಳು. ಈ ಕುರಿತು ಸ್ಥಳೀಯ ಠಾಣೆಯಲ್ಲಿ ದೂರು ಸಲ್ಲಿಸಿದ್ದೆ. ಆದರೆ ಶನಿವಾರ ಬೆಳಗಿನ ಜಾವ ಹಳ್ಳದಲ್ಲಿ ಪತ್ನಿಯ ಮೃತದೇಹ ಪತ್ತೆಯಾಗಿದ್ದು, ಬಸವರಾಜ ತಟ್ಟಿ ಪತ್ನಿಯನ್ನು ಕೊಲೆ ಮಾಡಿರುವ ಅನುಮಾನವಿದೆ ಎಂದು ಮೃತಳ ಪತಿ ಶರಣಪ್ಪ ನೀಡಿದ ದೂರಿನ ಮೇರೆಗೆ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಸದ್ಯ ತಲೆ ಮರೆಸಿಕೊಂಡಿದ್ದು ಪತ್ತೆಗೆ ಪೊಲೀಸರು ಬಲೆ ಬೀಸಲಾಗಿದೆ ಎಂದು ಸ್ಥಳೀಯ ಠಾಣೆಯ ಸಿಪಿಐ ಚಂದ್ರಶೇಖರ ಜಿ., ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು