ಕೊಪ್ಪಳ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಸಾವಿನ ಸುದ್ದಿ ಅರಗಿಸಿಕೊಳ್ಳಲಾಗದೆ ಮತ್ತೋರ್ವ ಅಭಿಮಾನಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಜ್ಞಾನಪೂರ್ತಿ ನಿಂಗಾಪುರ (40) ಮೃತ ಅಭಿಮಾನಿ ಎನ್ನಲಾಗಿದೆ.
ಪುನೀತ್ ರಾಜ್ ಕುಮಾರ್ ಸಾವಿನ ಸುದ್ದಿ ಕೇಳುತ್ತಿದ್ದಂತೆ ಜ್ಞಾನಮೂರ್ತಿ ನಿಂಗಾಪುರ ಅಸ್ವಸ್ಥರಾದ ಕಾರಣ ತಕ್ಷಣ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಹೃದಯಾಘಾತವಾಗಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಕಿರಾಣಿ ಅಂಗಡಿ ನಡೆಸುತ್ತಿದ್ದ ಜ್ಞಾನಮೂರ್ತಿ ಅಪ್ಪಟ ಪುನೀತ್ ಅಭಿಮಾನಿಯಾಗಿದ್ದರು. ಪುನೀತ್ ರಾಜ್ ಕುಮಾರ್ ಅವರ ಬಹುತೇಕ ಸಿನಿಮಾಗಳನ್ನು ಫಸ್ಟ್ ಶೋ ನೋಡುತ್ತಿದ್ದರು. ನೆಚ್ಚಿನ ನಟ ಇನ್ನಿಲ್ಲ ಎಂಬ ಸುದ್ದಿ ಕೇಳಿ ಅಕಾಲಿಕ ಮರಣವನ್ನಪ್ಪಿರುವುದಾಗಿ ತಿಳಿದುಬಂದಿದೆ.