ಕೊಪ್ಪಳ

ದೇವಾಲಯ ಪ್ರವೇಶಿಸಿದಕ್ಕೆ ದಲಿತನೋರ್ವನಿಗೆ 11 ಸಾವಿರ ರೂಪಾಯಿ ತೆರುವಂತೆ ಮಾಡಿದ ಗ್ರಾಮಸ್ಥರು

ಕೊಪ್ಪಳ: 11 ದಿನಗಳ ಹಿಂದೆ ಈ ಘಟನೆ ವ್ಯಕ್ತಿಯೋರ್ವ ಲಕ್ಷ್ಮಿ ದೇವಿ ದೇವಾಲಯಕ್ಕೆ ಪ್ರವೇಶಿಸಿದ್ದಕ್ಕೆ 11 ಸಾವಿರ ರೂಪಾಯಿಗಳನ್ನು ಆತನಿಂದ ಖರ್ಚು ಮಾಡಿಸಿ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಲಾಗಿದೆ.ದೇವಸ್ಥಾನಕ್ಕೆ ಪ್ರವೇಶಿಸಿದ ಮಗುವೊಂದು ದಲಿತ ಸಮುದಾಯಕ್ಕೆ ಸೇರಿದ್ದು ಎಂಬ ಕಾರಣಕ್ಕೆ ಆ ಕುಟುಂಬದವರಿಗೆ 25,000 ದಂಡ ವಿಧಿಸಿದ ಘಟನೆ ಕುಷ್ಟಗಿಯಲ್ಲಿ ವರದಿಯಾದ ಬೆನ್ನಲ್ಲೇ ಇಂಥಹದ್ದೇ ಘಟನೆ ಕರಟಗಿಯಲ್ಲಿ ವರದಿಯಾಗಿರುವುದು‌‌ ಬೇಸರದ ಸಂಗತಿ.”ಹೌದು ದೇವಾಲಯ ಪ್ರವೇಶಿಸಿದ್ದ ಕಾರಣಕ್ಕಾಗಿ ಧಾರ್ಮಿಕ ಕಾರ್ಯಕ್ರಮ ಆಯೋಜಿಸುವುದಕ್ಕೆ ಆತನಿಂದ 11,000 ರೂಪಾಯಿ ಖರ್ಚು ಮಾಡಿಸಲಾಗಿದೆ. ನಮ್ಮ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ಎಸ್ ಪಿ ಶ್ರೀಧರ ಟಿ ಹೇಳಿದ್ದಾರೆ.ಪೊಲೀಸ್ ಅಧಿಕಾರಿಯ ಪ್ರಕಾರ ಶುಕ್ರವಾರದಂದು ಈ ಘಟನೆ ವರದಿಯಾಗಿದ್ದು, ಆಗಿನಿಂದಲೂ ಅರ್ಚಕರು ದಲಿತನಿಗೆ ಧಾರ್ಮಿಕ ಕಾರ್ಯಕ್ರಮ ನಡೆಸಲು ಆಗ್ರಹಿಸಿದ್ದರು.ಕಳೆದ ಕೆಲವು ತಿಂಗಳ ಹಿಂದೆ ದೇವಾಲಯದಲ್ಲಿ ಕಳವು ಸಂಭವಿಸಿತ್ತು ಹಾಗೂ ಅರ್ಚಕರನ್ನು ಹೊರತುಪಡಿಸಿ ಬೇರೆ ಯಾರೂ ದೇವಾಲಯಕ್ಕೆ ಹೋಗಕೂಡದೆಂಬ ನಿರ್ಧಾರ ಕೈಗೊಳ್ಳಲಾಗಿತ್ತು, ಆದರೆ ದಲಿತ ವ್ಯಕ್ತಿಯೋರ್ವ ದೇವಾಲಯದ ಒಳಗೆ ಪ್ರವೇಶಿಸಿದ್ದ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.ಗ್ರಾಮದ ಹಿರಿಯರು ಕೈಗೊಂಡಿದ್ದ ನಿರ್ಧಾರವನ್ನು ಉಲ್ಲಂಘನೆ ಮಾಡಿ ದಲಿತ ವ್ಯಕ್ತಿ ಸೆ.14 ರಂದು ದೇವಾಲಯ ಪ್ರವೇಶಿಸಿದ್ದ. ಈ ಘಟನೆಗೆ ಸಂಬಂಧ ಐವರು ವ್ಯಕ್ತಿಗಳನ್ನು ಬಂಧಿಸಲಾಗಿದೆ.

Swathi MG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

2 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

3 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

3 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

3 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

4 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

4 hours ago