Categories: ಕೊಪ್ಪಳ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಲು ಕಾಂಗ್ರೆಸ್ ನ ವಿರೋಧವಿಲ್ಲ: ಡಿ.ಕೆ. ಶಿವಕುಮಾರ್

ಕೊಪ್ಪಳ ‌:  ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಲು ಕಾಂಗ್ರೆಸ್ ನ ವಿರೋಧವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ನಗರದಲ್ಲಿ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅಭಿಯಾನದ ಪ್ರಗತಿ ಪರಿಶೀಲನಾ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಪಠ್ಯದಲ್ಲಿ ಭಗವದ್ಗೀತೆಯ ಪಾಠಗಳನ್ನು ಅಳವಡಿಸಲು ನಮ್ಮ ಒಪ್ಪಿಗೆ ಇದೆ. ನಾವೂ ಹಿಂದೂಗಳು. ನಮ್ಮದು ಯಾವ ವಿರೋಧವಿಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್ ಸಂವಿಧಾನದಲ್ಲಿಯೇ ಎಲ್ಲಾ ಧರ್ಮದ ಗ್ರಂಥಗಳನ್ನು ಓದಲು ಅವಕಾಶ ನೀಡಿದ್ದಾರೆ ಎಂದರು.

ಭಗವದ್ಗೀತೆಯ ಸಾರವನ್ನು ದೇಶಾದ್ಯಂತ ಪ್ರಚಾರ ಪಡಿಸಿದ್ದೇ ಮಾಜಿ ಪ್ರಧಾನಮಂತ್ರಿ ರಾಜೀವ್‌ ಗಾಂಧಿ. ಹಾಗಿದ್ದ ಮೇಲೆ ನಮ್ಮದೇಕೆ ವಿರೋಧ ಇರುತ್ತದೆ. ನಮ್ಮ ಪಕ್ಷದ ರಾಜೀವ್ ಗಾಂಧಿಯವರೇ ಭಗವದ್ಗೀತೆ ಬಗ್ಗೆ ದೇಶದಲ್ಲಿ ಪ್ರಚುರಪಡಿಸಿದ್ದಾರೆ. ಇದೀಗ ಬಿಜೆಪಿಯವರು ಈ ವಿಷಯ ಪ್ರಸ್ತಾಪಿಸುತ್ತಿದ್ದಾರೆ ಎಂದರು.

Sneha Gowda

Recent Posts

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

2 mins ago

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

8 mins ago

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

20 mins ago

ತೃತೀಯ ಲಿಂಗಿಯ ಹತ್ಯೆ ಪ್ರಕರಣ: ಮಹಿಳೆಯ ಬಂಧನ

ತೃತೀಯ ಲಿಂಗಿಯನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.

39 mins ago

ಬಿಗ್‌ಬಾಸ್‌ 16 ಸ್ಪರ್ಧಿ ʼಅಬ್ದು ರೋಝಿಕ್‌ʼಗೆ ಮದುವೆಯಂತೆ

ಬಿಗ್‌ಬಾಸ್‌ 16ನಲ್ಲಿ ಸ್ಪರ್ಧಿಸಿದ್ದ ಅಬ್ದು ರೋಝಿಕ್‌ ವಿಡಿಯೋವೊಂದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾನೀಗ ಪ್ರೀತಿಗೆ ಬಿದ್ದಿದ್ದು, ಜುಲೈ 7ರಂದು ಮನಮೆಚ್ಚಿದ…

49 mins ago

ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

1 hour ago