ಕೊಪ್ಪಳ

ಮಠಾಧೀಶರುಗಳಿಗೆ ಸವಾಲು: ತನ್ನ ಹೇಳಿಕೆ ಹಿಂಪಡೆದುಕೊಂಡ ವಿದ್ಯಾರ್ಥಿನಿ

ಕೊಪ್ಪಳ : ನಮಗೆ ಮೊಟ್ಟೆ ಕೊಡಬೇಡಿ ಎಂದು ವಿರೋಧ ಮಾಡಿದರೆ, ನಾವು ನಿಮ್ಮ ಮಠಕ್ಕೆ ಬಂದು ಮೊಟ್ಟೆ ತಿಂದು ಹೋಗುತ್ತೇವೆ ಎಂದು ಸವಾಲು ಹಾಕಿದ್ದ ವಿದ್ಯಾರ್ಥಿನಿ ಇದೀಗ ತನ್ನ ಹೇಳಿಕೆಯನ್ನು ಹಿಂಪಡೆದುಕೊಂಡಿದ್ದಾಳೆ.

ಶಾಲೆಯಲ್ಲಿ ಮೊಟ್ಟೆ ನೀಡಲು ಕೆಲ‌ ಮಠಾಧೀಶರ ವಿರೋಧ ಹಿನ್ನೆಲೆಯಲ್ಲಿ ಎಸ್‌ಎಫ್‌ಐ ಸಂಘಟನೆ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ವಿದ್ಯಾರ್ಥಿನಿ ಮಾತನಾಡಿದ್ದಳು. ಅದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್​ ಆಗಿತ್ತು.

ಇದೀಗ ತನ್ನ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿರುವ ವಿದ್ಯಾರ್ಥಿನಿ, ನಾನು ಆವೇಶದಲ್ಲಿ ಮಠಕ್ಕೆ ಬಂದು ಮೊಟ್ಟೆ ತಿನ್ನುತ್ತೇವೆ ಅಂತಾ ಹೇಳಿದ್ದೇನೆ. ಹಾಗಂದ ಮಾತ್ರಕ್ಕೆ ನಾನು ಮಠಕ್ಕೆ ಹೋಗಿ ಮೊಟ್ಟೆ ತಿನ್ನುವುದಿಲ್ಲ. ಆದರೆ, ಮಠಾಧೀಶರು ಮೊಟ್ಟೆ ನೀಡುವುದನ್ನು ವಿರೋಧಿಸಿದ್ದು ತಪ್ಪು. ಸ್ವಾಮೀಜಿಗಳೂ ಕೂಡ ತಮ್ಮ ವಿರೋಧವನ್ನು ಕೈ ಬಿಡಬೇಕು ಎಂದು ವಿದ್ಯಾರ್ಥಿನಿ ಮನವಿ ಮಾಡಿದ್ದಾಳೆ.

ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಈ ಯೋಜನೆ ಒಳ್ಳೆಯದು. ವೈದ್ಯರೇ ಮೊಟ್ಟೆ ತಿನ್ನುವಂತೆ ಸಲಹೆ ನೀಡುತ್ತಾರೆ. ಮೊಟ್ಟೆ ತಿನ್ನದೇ ಇದ್ದವರಿಗೆ ಬಾಳೇಹಣ್ಣು ಕೊಡುತ್ತಿದ್ದಾರೆ. ಆದರೆ, ಮೊಟ್ಟೆ ಕೊಡದಂತೆ ವಿರೋಧ ಮಾಡುವುದು ಸರಿಯಲ್ಲ. ಮೊಟ್ಟೆ ತಿನ್ನದವರು ಬಾಳೇಹಣ್ಣು ತೆಗೆದುಕೊಳ್ಳಲಿ ಎಂದು ಕೊಪ್ಪಳ ಜಿಲ್ಲೆಯ ಗಂಗಾವತಿ ವಿದ್ಯಾರ್ಥಿನಿ ಅಂಜಲಿ ಸ್ಪಷ್ಟನೆ ನೀಡಿದ್ದಾಳೆ.

Gayathri SG

Recent Posts

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

22 mins ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

45 mins ago

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

1 hour ago

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

1 hour ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

2 hours ago

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

9 hours ago