ಕೊಪ್ಪಳ

ಇಎಮ್‍ಐ ನಿಂದ ಅಪೌಷ್ಟಿಕತೆ ನಿರ್ಮೂಲನಾ ಅಭಿಯಾನ

ಕೊಪ್ಪಳ(ಯಲಬುರ್ಗಾ):  ಅಪೌಷ್ಟಿಕತೆಯ ಹೊರೆಯನ್ನು ಕಡಿಮೆ ಮಾಡುವ ಒಂದು  ಸಾರ್ವಜನಿಕ ಆರೋಗ್ಯ ಪರಿಕಲ್ಪನೆಯನ್ನು, ಎಡ್ವರ್ಡ್ ಮತ್ತು ಸಿಂಥಿಯಾ ಇನ್‍ಸ್ಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್ (ಯೆನೆಪೊಯ ಜೊತೆಗಿನ ಸಿಎಚ್‍ಡಿ ಗ್ರೂಪ್ ಮತ್ತು ಸುಧಾರಿತ ತಾಂತ್ರಿಕ ಸಹಕಾರ ಕೇಂದ್ರದ ಒಂದು ಘಟಕ) ಅಪೌಷ್ಟಿಕತೆ ನಿರ್ಮೂಲನಾ ಅಭಿಯಾನ ಕಾರ್ಯಕ್ರಮವನ್ನು ಯಲಬುರ್ಗಿಯಲ್ಲಿ ಹಮ್ಮಿಕೊಂಡಿತ್ತು.

ಈ ಉಪಕ್ರಮವನ್ನು ಸಾರ್ವಜನಿಕ ಆರೋಗ್ಯದ ದೃಷ್ಟಿಕೋನದಿಂದ ಪ್ರಾಯೋಗಿಕವಾಗಿ ನಡೆಸಲಾಯಿತು ಮತ್ತು  ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಅಂಗನವಾಡಿಯಲ್ಲಿ ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮವಾಗಿ ಜಾರಿಗೊಳಿಸಲಾಯಿತು. ಈ ಉಪಕ್ರಮವು ತೀವ್ರವಾದ ಅಪೌಷ್ಟಿಕತೆ ಹೊಂದಿರುವ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಅಪೌಷ್ಟಿಕತೆಯನ್ನು ಕಡಿಮೆಗೊಳಿಸುವ ಮತ್ತು ಮಧ್ಯಮ ತೀವ್ರ ಅಪೌಷ್ಟಿಕತೆಯ ಹೊರೆಯನ್ನು ಕಡಿಮೆ ಮಡುವ ಗುರಿಯನ್ನು ಹೊಂದಿದೆ.

ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸಹಕಾರ ಸಿಎಚ್‍ಡಿ ಗ್ರೂಪ್ ಇದನ್ನು ಅನುಷ್ಠಾನಗೊಳಿಸಿದೆ.  ಆಗಸ್ಟ್ 2022ರಲ್ಲಿ 31 ತೀವ್ರ ಅಪೌಷ್ಟಿಕತೆ ಹೊಂದಿರುವ ಮಕ್ಕಳಿಂದ, ಮಾರ್ಚ್ 2023ರಲ್ಲಿ ಸಂಖ್ಯೆ 11ಕ್ಕೆ ಇಳಿದಿದೆ. ಅಂತೆಯೇ ಸೆಪ್ಟೆಂಬರ್ 2022ರಲ್ಲಿ 1067 ಮಧ್ಯಮ ತೀವ್ರ ಅಪೌಷ್ಟಿಕತೆಯ ಮಕ್ಕಳಿಂದ, ಮಾರ್ಚ್ 2023ರಲ್ಲಿ ಸಂಖ್ಯೆ 329ಕ್ಕೆ ಇಳಿದಿದೆ.

ಇನ್ನು ಈ ಕಾರ್ಯಕ್ರಮದ ವೇಳೆ ಐದು ವರ್ಷದೊಳಗಿನ ಮಕ್ಕಳ ಪಾಲಕರು, ಅಂಗನವಾಡಿ ಮೇಲ್ವಿಚಾರಕರು, ಸಮುದಾಯದ ಹಿರಿಯರು, ಚುನಾಯಿತ ಪ್ರತಿನಿಧಿಗಳು,  ಮುಖಂಡರು ಭಾಗಿಯಾಗಿದ್ದರು.

ಎಡ್ವರ್ಡ್ ಮತ್ತು ಸಿಂಥಿಯಾ ಇನ್‍ಸ್ಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್‍ನ ನಿರ್ದೇಶಕ ಡಾ. ಎಡ್ಮಂಡ್ ಫೆನಾರ್ಂಡಿಸ್ ಈ ವಿಷಯದ ಕುರಿತು ಮಾತನಾಡುತ್ತಾ, ಇಂತಹ ಪರಿಕಲ್ಪನೆಗಳು 2030ರ ವೇಳೆಗೆ ಭಾರತದಿಂದ ಅಪೌಷ್ಟಿಕತೆಯನ್ನು ತೊಡೆದುಹಾಕಬಹುದು. ಆದರೆ ಗಂಭೀರವಾದ ರಾಜಕೀಯ ಇಚ್ಛಾಶಕ್ತಿ, ಸಾಪ್ತಾಹಿಕ, ಬೆಂಬಲಿತ ಮೇಲ್ವಿಚಾರಣೆ ಮತ್ತು ಪೋಷಕರ ಸಹಕಾರದ ಅಗತ್ಯವಿದೆ ಎಂದು ಹೇಳಿದ್ದಾರೆ.

 

Ashitha S

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

5 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

6 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

7 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

7 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

7 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

8 hours ago