ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ವಡ್ಡರಹಟ್ಟಿ ಗ್ರಾಮದಲ್ಲಿ ಬೈಕ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತ ವ್ಯಕ್ತಿಯನ್ನು ಮುರ್ತುಜಾ(46) ಎಂದು ಗುರುತಿಸಲಾಗಿದೆ. ಬೈಕ್ ಮೂಲಕ ರಸ್ತೆ ಕ್ರಾಸ್ ಮಾಡುವಾಗ ಈ ಅಪಫಾತ ನಡೆದಿದೆ. ಆಕ್ರೋಶಗೊಂಡ ಗ್ರಾಮಸ್ಥರು ತಡರಾತ್ರಿ ರಾಜ್ಯ ಹೆದ್ದಾರಿ ಬಂದ್ ಮಾಡಿದ್ದಾರೆ. ತಿಂಗಳಿಗೆ ಎರಡ್ಮೂರು ಅಪಘಾತವಾದ್ರೂ, ಅಧಿಕಾರಿಗಳು ನಿರ್ಲಕ್ಷ್ಯವಹಿಸುತ್ತಿದ್ದಾರೆ. ರಸ್ತೆಗೆ ಸ್ಪೀಡ್ ಬ್ರೇಕರ್ ಹಾಕೋವರೆಗೂ ಪ್ರತಿಭಟನೆ ಮಾಡುತ್ತೇವೆ ಎಂದ ಗ್ರಾಮಸ್ಥರು ಹೇಳಿದ್ದಾರೆ. ರಸ್ತೆಯಲ್ಲಿ ಬೆಂಕಿ ಹಚ್ಚಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಪೊಲೀಸರ ಆಗಮಿಸಿ ಗ್ರಾಮಸ್ಥರನ್ನು ಸಿಪಿಐ ಸಮಾಧಾನಪಡಿಸಿದ್ದಾರೆ.