ಕುಷ್ಟಗಿ : ತಾಲೂಕಿನ ಕಡೇಕೊಪ್ಪ ಗ್ರಾಮದ ನಿಂಗಪ್ಪ ಜಿಗೇರಿ,ರೇಖಾ ಜಿಗೇರಿ ದಂಪತಿಗಳ ಸೀಮಂತ ಕಾರ್ಯಕ್ರಮದಲ್ಲಿ ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟಲು ಜಾಗೃತಿ ಮೂಡಿಸಿರುವುದು ಗಮನಾರ್ಹ ಎನಿಸಿದೆ. ಸೀಮಂತ ಕಾರ್ಯಕ್ರಮಕ್ಕೆ ಬರುವ ಪ್ರತಿಯೊಬ್ಬರಿಗೂ ಸಹ ಹೆಣ್ಣು ಭ್ರೂಣ ಹತ್ಯೆ ಮಹಾ ಅಪರಾಧ ಭ್ರೂಣ ಹತ್ಯೆ ನಿಲ್ಲಿಸಬೇಕು
ಕಾನೂನು ಬಾಹಿರ ಭ್ರೂಣ ಪರೀಕ್ಷೆ ಮತ್ತು ಭ್ರೂಣ ಹತ್ಯೆ ಪ್ರಕರಣಗಳನ್ನು ಹತ್ತಿಕ್ಕುವ ನಿಟ್ಟಿನಲ್ಲಿ ವಿಶೇಷವಾದ ನೀತಿಯೊಂದನ್ನು ಜಾರಿ ಮಾಡಲು ಸರ್ಕಾರ ಮುಂದಾಗಬೇಕು ಎಂದು ನವದಂಪತಿಗಳು ಅರಿವು ಮೂಡಿಸಿದರುಭ್ರೂಣ ಹತ್ಯೆ ನಿಲ್ಲಿಸಿ ಎಂದು ಫಲಕ ಪ್ರದರ್ಶಿಸಿದರು.