News Karnataka Kannada
Friday, May 10 2024
ಕೊಪ್ಪಳ

ಅಕ್ರಮ ಜಾನುವಾರು ಸಾಗಾಟ: 9 ಆರೋಪಿಗಳು ಪೊಲೀಸರ ವಶಕ್ಕೆ

ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ 16 ಎತ್ತುಗಳನ್ನು ಆರೋಪಿಗಳು ಖರೀದಿಸಿ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಗಂಗಾವತಿ ಗ್ರಾಮೀಣ ಠಾಣಾ ಪೊಲೀಸರು ದಾಳಿ ನಡೆಸಿ, 16 ಜಾನುವಾರುಗಳನ್ನು ರಕ್ಷಣೆ ಮಾಡಿ, 9 ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ.
Photo Credit : NewsKarnataka

ಗಂಗಾವತಿ: ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ 16 ಎತ್ತುಗಳನ್ನು ಆರೋಪಿಗಳು ಖರೀದಿಸಿ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಗಂಗಾವತಿ ಗ್ರಾಮೀಣ ಠಾಣಾ ಪೊಲೀಸರು ದಾಳಿ ನಡೆಸಿ, 16 ಜಾನುವಾರುಗಳನ್ನು ರಕ್ಷಣೆ ಮಾಡಿ, 9 ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಆಲೂರು ಮಂಡಲದ ಸೀನಹೊತೂರಿನ ಚಾಲಕ ರಘುವೀರ್, ತುಮಿಳುಬೀಡು ಗ್ರಾಮದ ಶೇಖಣ್ಣ ತಹಸೀಲ್ದಾರ್, ಚಂದ್ರಣ್ಣ ತಹಸೀಲ್ದಾರ್, ರಾಮಾಂಜನೇಯ, ಹಂಪಾ ಗ್ರಾಮದ ಆಂಜನೇಯ, ಪೆದ್ದಹೂತೂರಿನ ಹುಚ್ಚೀರಪ್ಪ, ಮೈನಾಪುರದ ವೈಕುಂಠ, ಟಿ. ಹುಚೀರಪ್ಪ ಹಾಗೂ ರಾಯಪ್ಪ ಕೊಡೇಕಲ್ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ಒಂದೇ ವಾಹನದಲ್ಲಿ ಇಕ್ಕಟ್ಟಾದ ಜಾಗದಲ್ಲಿ ಜಾನುವಾರುಗಳಿಗೆ ಕೂರಲು, ನಿಲ್ಲಲು ಅವಕಾಶವಿಲ್ಲದಂತೆ ಸಾಗಿಸಲಾಗುತ್ತಿತ್ತು. ಈ ಖಚಿತ ಮಾಹಿತಿಯ ಮೇರೆಗೆ ಗಂಗಾವತಿ ತಾಲೂಕಿನ ಕಡೇಬಾಗಿಲು ಗ್ರಾಮದ ಬಳಿ ದಾಳಿ ಮಾಡಿದ ಪೊಲೀಸರು, ವಾಹನದಲ್ಲಿ ಪರಿಶೀಲನೆ ಮಾಡಲಾಗಿ 16 ಜಾನುವಾರುಗಳನ್ನು ಅಕ್ರಮವಾಗಿ ಅಸುರಕ್ಷಿತವಾಗಿ ಸಾಗಿಸುತ್ತಿರುವ ಮಾಹಿತಿ ತಿಳಿದು ಬಂದಿದೆ.

ಜಾನುವಾರುಗಳನ್ನು ಖರೀದಿ ಮಾಡಿದ್ದಕ್ಕೆ ಅಥವಾ ಸಾಗಾಣಿಕೆ ಮಾಡುತ್ತಿರುವುದಕ್ಕೆ ಯಾವುದೇ ದಾಖಲೆಗಳು ಇಲ್ಲದಿರುವುದರಿಂದ ಅನುಮಾನಗೊಂಡ ಪೊಲೀಸರು, ಜಾನುವಾರುಗಳನ್ನು ರಕ್ಷಣೆ ಮಾಡಿ, ವಾಹನ ಸಮೇತ ಆರೋಪಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು