Categories: ಕೊಪ್ಪಳ

ಅಕ್ರಮ ಜಾನುವಾರು ಸಾಗಾಟ: 9 ಆರೋಪಿಗಳು ಪೊಲೀಸರ ವಶಕ್ಕೆ

ಗಂಗಾವತಿ: ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ 16 ಎತ್ತುಗಳನ್ನು ಆರೋಪಿಗಳು ಖರೀದಿಸಿ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಗಂಗಾವತಿ ಗ್ರಾಮೀಣ ಠಾಣಾ ಪೊಲೀಸರು ದಾಳಿ ನಡೆಸಿ, 16 ಜಾನುವಾರುಗಳನ್ನು ರಕ್ಷಣೆ ಮಾಡಿ, 9 ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಆಲೂರು ಮಂಡಲದ ಸೀನಹೊತೂರಿನ ಚಾಲಕ ರಘುವೀರ್, ತುಮಿಳುಬೀಡು ಗ್ರಾಮದ ಶೇಖಣ್ಣ ತಹಸೀಲ್ದಾರ್, ಚಂದ್ರಣ್ಣ ತಹಸೀಲ್ದಾರ್, ರಾಮಾಂಜನೇಯ, ಹಂಪಾ ಗ್ರಾಮದ ಆಂಜನೇಯ, ಪೆದ್ದಹೂತೂರಿನ ಹುಚ್ಚೀರಪ್ಪ, ಮೈನಾಪುರದ ವೈಕುಂಠ, ಟಿ. ಹುಚೀರಪ್ಪ ಹಾಗೂ ರಾಯಪ್ಪ ಕೊಡೇಕಲ್ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ಒಂದೇ ವಾಹನದಲ್ಲಿ ಇಕ್ಕಟ್ಟಾದ ಜಾಗದಲ್ಲಿ ಜಾನುವಾರುಗಳಿಗೆ ಕೂರಲು, ನಿಲ್ಲಲು ಅವಕಾಶವಿಲ್ಲದಂತೆ ಸಾಗಿಸಲಾಗುತ್ತಿತ್ತು. ಈ ಖಚಿತ ಮಾಹಿತಿಯ ಮೇರೆಗೆ ಗಂಗಾವತಿ ತಾಲೂಕಿನ ಕಡೇಬಾಗಿಲು ಗ್ರಾಮದ ಬಳಿ ದಾಳಿ ಮಾಡಿದ ಪೊಲೀಸರು, ವಾಹನದಲ್ಲಿ ಪರಿಶೀಲನೆ ಮಾಡಲಾಗಿ 16 ಜಾನುವಾರುಗಳನ್ನು ಅಕ್ರಮವಾಗಿ ಅಸುರಕ್ಷಿತವಾಗಿ ಸಾಗಿಸುತ್ತಿರುವ ಮಾಹಿತಿ ತಿಳಿದು ಬಂದಿದೆ.

ಜಾನುವಾರುಗಳನ್ನು ಖರೀದಿ ಮಾಡಿದ್ದಕ್ಕೆ ಅಥವಾ ಸಾಗಾಣಿಕೆ ಮಾಡುತ್ತಿರುವುದಕ್ಕೆ ಯಾವುದೇ ದಾಖಲೆಗಳು ಇಲ್ಲದಿರುವುದರಿಂದ ಅನುಮಾನಗೊಂಡ ಪೊಲೀಸರು, ಜಾನುವಾರುಗಳನ್ನು ರಕ್ಷಣೆ ಮಾಡಿ, ವಾಹನ ಸಮೇತ ಆರೋಪಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

Chaitra Kulal

Recent Posts

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

6 mins ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

22 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

26 mins ago

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

49 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

1 hour ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

1 hour ago