ಕೊಪ್ಪಳ: ಕಾರು ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಹೇಮಗುಡ್ಡ ಬಳಿ ನಡೆದಿದೆ.
ಜ.2ರ ಸೋಮವಾರ ಸಂಜೆ 4 ಗಂಟೆಗೆ ರಾಯಚೂರು-ಕೊಪ್ಪಳ ಹೆದ್ದಾರಿಯಲ್ಲಿ ಕೆಲಸ ಮುಗಿಸಿಕೊಂಡು ಗ್ರಾಮಕ್ಕೆ ವಾಪಸಾಗುತ್ತಿದ್ದಾಗ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಹನುಮೇಶ್ (30) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಾನಸಯ್ಯ (22) ಗಂಭೀರವಾಗಿ ಗಾಯಗೊಂಡಿದ್ದು, ಗಂಗಾವತಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾಸಕ ಪರಣ್ಣ ಮುನವಳ್ಳಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬ ಸದಸ್ಯರು ಮತ್ತು ಗಾಯಾಳುಗಳಿಗೆ ಸಾಂತ್ವನ ಹೇಳಿದರು.
ಡಿಎಸ್ಪಿ ಉಜ್ಜನಕೊಪ್ಪ, ಸಿಪಿಐ ಮಂಜುನಾಥ್, ವೈದ್ಯಾಧಿಕಾರಿ ಈಶ್ವರ ಸವದಿ ಮತ್ತಿತರರು ಉಪಸ್ಥಿತರಿದ್ದರು.