ಕೊಪ್ಪಳ: ನಗರದ ಹೊರವಲಯದ ಪಂಚಮಸಾಲಿ ಸಮುದಾಯ ಭವನದ ಬಳಿ ನವೆಂಬರ್ 12ರ ಶನಿವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಶರಣಪ್ಪ ಲೆಬಗೇರಿ ಮತ್ತು ಡಿಎಸ್ ಎಸ್ ರಾಜ್ಯ ಸಂಚಾಲಕ ಅಶೋಕ ಎಂದು ಗುರುತಿಸಲಾಗಿದೆ.
ಶನಿವಾರ ಸಂಜೆ 7 ಗಂಟೆ ಸುಮಾರಿಗೆ ಕೊಪ್ಪಳದಿಂದ ಲೆಬಗೇರಿ ಗ್ರಾಮಕ್ಕೆ ಬೈಕಿನಲ್ಲಿ ತೆರಳುತ್ತಿದ್ದ ಈ ಇಬ್ಬರು ವ್ಯಕ್ತಿಗಳು ಪಂಚಮಸಾಲಿ ಸಮುದಾಯ ಭವನದ ಬಳಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದ್ದಾರೆ.
ಅವರ ದ್ವಿಚಕ್ರ ವಾಹನವು ಟ್ರಾಕ್ಟರ್ ಗೆ ಡಿಕ್ಕಿ ಹೊಡೆದ ನಂತರ ಅವರಲ್ಲಿ ಇಬ್ಬರಿಗೆ ತೀವ್ರ ರಕ್ತಸ್ರಾವವಾಗಿದೆ. ತಲೆ ಮತ್ತು ಮುಖಕ್ಕೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಇಬ್ಬರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕೊಪ್ಪಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.