Categories: ಕೊಪ್ಪಳ

ಕುಮಾರಸ್ವಾಮಿಗೆ ನೈತಿಕತೆಯೇ ಇಲ್ಲ ಎಂದ ಸಿಎಂ ಸಿದ್ದರಾಮಯ್ಯ

ಕೊಪ್ಪಳ: ರಾಜ್ಯದ ಜನರಿಗೆ ಗ್ಯಾರಂಟಿ ಯೋಜನೆಗಳನ್ನು ಕೈಗಿಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ 6 ತಿಂಗಳು ಪೂರೈಸಿದೆ.

ಈ 6 ತಿಂಗಳ ಅವಧಿಯಲ್ಲಿ ಸರ್ಕಾರ ಜಾರಿಗೆ ಕೊಟ್ಟ ಗ್ಯಾರಂಟಿ ಯೋಜನೆಗಳ ಪ್ರತಿಫಲ, ಮಹಿಳೆಯರು, ಮಕ್ಕಳು, ಯುವಜನರು, ರೈತರು, ಕಾರ್ಮಿಕರು, ಶೋಷಿತರನ್ನು ಕೇಂದ್ರೀಕರಿಸಿ ರೂಪಿಸಿರುವ ಕಾರ್ಯಕ್ರಮಗಳು, ವಿಶೇಷವಾಗಿ ಗ್ಯಾರಂಟಿ ಯೋಜನೆಗಳು ರಾಜ್ಯದ ಶೇ.96ಕ್ಕಿಂತ ಹೆಚ್ಚು ಮಂದಿ ಒಂದಲ್ಲ ಒಂದು ರೀತಿಯಲ್ಲಿ ಪ್ರಯೋಜನ ಪಡೆದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ಅವರು ಬಿಜೆಪಿ ನುಡಿದಂತೆ ನಡೆಯುವ ಪಕ್ಷ ಅಲ್ಲ. ಆದ್ದರಿಂದ ಅವರ ಯಾವ ಭರವಸೆಗಳನ್ನು ಜನರು ನಂಬುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ರಾಜ್ಯಗಳಲ್ಲಿ ಬಿಜೆಪಿಯವರು ಈಗ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡುತ್ತಿದ್ದಾರೆ. ಬಿಜೆಪಿಯವರು ಬಹಳ ವರ್ಷಗಳಿಂದ ಮಧ್ಯಪ್ರದೇಶದಲ್ಲಿ ಅಧಿಕಾರದಲ್ಲಿದ್ದರೂ, ಯಾವ ಪ್ರಗತಿಯನ್ನೂ ಸಾಧಿಸಿಲ್ಲ. ಈಗ ಪ್ರಗತಿ ಸಾಧಿಸುವುದಾಗಿ ಭರವಸೆಗಳನ್ನು ನೀಡುತ್ತಿದ್ದಾರೆ. ಅವರ ಮಾತುಗಳನ್ನು ಜನರು ನಂಬುವುದಿಲ್ಲ ಎಂದರು.

ವಿದ್ಯುತ್ ಕಳ್ಳತನ ಎಸಗಿ ದಂಡ ಕಟ್ಟಿರುವ ಕುಮಾರಸ್ವಾಮಿಯವರಿಗೆ ನಮ್ಮನ್ನು ಪ್ರಶ್ನಿಸಲು ಯಾವ ನೈತಿಕತೆಯೂ ಇಲ್ಲ. ಮಾಜಿ ಶಾಸಕ ಯತೀಂದ್ರ ದುಡ್ಡಿನ ವ್ಯವಹಾರದ ಬಗ್ಗೆ ಮಾತನಾಡಿದ್ದಾರೆಯೇ , ಅವರ ಬಳಿ ಏನಾದರೂ ಪುರಾವೆ ಇದೆಯೇ ಎಂದು ಪ್ರಶ್ನಿಸಿದರು.

Ashika S

Recent Posts

ಸಿಎಂ ಸಿದ್ದು ತವರು ಕ್ಷೇತ್ರದಲ್ಲಿ ವಾಂತಿ-ಬೇದಿಯಿಂದ ತತ್ತರಿಸಿದ ಗ್ರಾಮಸ್ಥರು ..!

ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…

5 mins ago

ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಾಸ: ಗ್ರಾಮಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ

ಧಾರವಾಡ ಜಿಲ್ಲೆಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಕೊರತೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ, ಕ್ರಮವಹಿಸಲು ಸೂಚಿಸಲಾಗಿದ್ದರೂ ತಾಂತ್ರಿಕ ಸಮಸ್ಯೆ,…

8 mins ago

ಮನೆಯ ಗೇಟ್ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಮೃತ್ಯು

ಮನೆಯ ಗೇಟ್ ಮುಂಭಾಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಮುದ್ರುಮಕ್ಕಿ…

23 mins ago

ಐತಿಹಾಸಿಕ ʻಹಲಗಲಿʼ ಕಥೆಗೆ ನಾಯಕನಾದ ನಟರಾಕ್ಷಸ ಧನಂಜಯ್

ಐತಿಹಾಸಿಕ ಕಥೆಯ ʻಹಲಗಲಿʼ ಸಿನಿಮಾಗೆ ನಟ ಡಾಲಿ ಧನಂಜಯ್‌ ನಾಯಕನಾಗಿ ಆಯ್ಕೆಯಾಗಿದ್ದಾರೆ. 'ಕೃಷ್ಣ ತುಳಸಿ' ಚಿತ್ರದ ಖ್ಯಾತ ಡೈರೆಕ್ಟರ್‌ ಸುಕೇಶ್‌…

24 mins ago

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚೆಕ್ ಇನ್ ವೇಳೆ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಪ್ರಯಾಣಿಕ!

ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಚೆಕ್ ಇನ್ ಮಾಡುತ್ತಿದ್ದ ವೇಳೆ ಪ್ರಯಾಣಿಕನೊಬ್ಬನ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಘಟನೆ…

29 mins ago

ಮುಂಬೈನ ಮೆಕ್​ಡೊನಾಲ್ಡ್ಸ್​ಗೆ ಬಾಂಬ್​ ಬೆದರಿಕೆ

ಇತ್ತೀಚೆಗೆ ದೇಶದಾದ್ಯಂತ ಬಾಂಬ್‌ ಬೆದರಿಕೆ ಕೇಳಿಬರುತ್ತವೆ ಇದರ ಹಿಂದೆ ಯಾರ ಕೈಚಳಕವಿದೆ ಎಂದು ಇನ್ನು ಬೆಳಕಿಗೆ ಬಂದಿಲ್ಲ. ಈಗಾಗಲೇ ಶಾಲೆಗಳಿಗ,…

40 mins ago