News Karnataka Kannada
Monday, April 22 2024
Cricket
ಕೊಪ್ಪಳ

ಗಣಿ ಉದ್ಯಮಿ ಗಾಲಿ ರೆಡ್ಡಿಗೆ ಮತ್ತೊಂದು ಸಂಕಷ್ಟ: ವರದಿ ಕೇಳಿದ ಆಯೋಗ

Mining baron Gali Reddy faces another crisis: Ec seeks report
Photo Credit : Facebook

ಕೊಪ್ಪಳ: ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಅವರು ವಿಧಾನಸಭಾ ಚುನಾವಣೆಗೂ ಮುನ್ನ ಸಲ್ಲಿಸಿರುವ ಚುನಾವಣಾ ಅಫಿಡವಿಟ್‌ನಲ್ಲಿ ವಾಹನಗಳು ಮತ್ತು ಆಸ್ತಿ ವಿವರಗಳನ್ನು ನೀಡಿಲ್ಲ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಕೊಪ್ಪಳ ಜಿಲ್ಲಾಧಿಕಾರಿಗಳಿಂದ ವರದಿ ಕೇಳಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ.

ಜನಾರ್ದನ ರೆಡ್ಡಿ ಸದ್ಯ ಗಂಗಾವತಿ ಕ್ಷೇತ್ರದ ಶಾಸಕರಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅನ್ಸಾರಿ ಹಾಗೂ ಬಿಜೆಪಿ ಅಭ್ಯರ್ಥಿ ಪರಣ್ಣ ಮುನವಳ್ಳಿ ಅವರನ್ನು ಸೋಲಿಸಿದ್ದರು.

ಗಣಿ ಉದ್ಯಮಿ ಜನಾದರ್ನ ರೆಡ್ಡಿ ಅವರು ನಾಮಪತ್ರ ಸಲ್ಲಿಸುವಾಗ ಸರಿಯಾದ ಮಾಹಿತಿ ನೀಡಿಲ್ಲ. ವಾಹನಗಳು ಹಾಗೂ ಆಸ್ತಿ ವಿವರಗಳ ಬಗ್ಗೆ ಸರಿಯಾಗಿ ಮಾಹಿತಿ ನೀಡಿಲ್ಲ ಎಂದು ಆರೋಪಿಸಿ ಅನಂತಪುರದ ಗಣಿ ಉದ್ಯಮಿ ಟಪಾಲು ಶ್ಯಾಮ್​ ಪ್ರಸಾದ್ ಎನ್ನುವವರು ಚುನಾವಣಾ ಆಯೋಕ್ಕೆ ದೂರು ನೀಡಿದ್ದರು.

ಈ ದೂರನ್ನು ಚುನಾವಣಾ ಆಯೋಗ ಸಹ ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಕೊಪ್ಪಳ ಜಿಲ್ಲಾಧಿಕಾರಿಗೆ ಪತ್ರ ಬರೆದಿದೆ. ರೆಡ್ಡಿ ಆಸ್ತಿ ಮುಟ್ಟುಗೋಲಿಗೆ ಹಿಂದಿನ ಬಿಜೆಪಿ ಸರ್ಕಾರ ಸಮ್ಮತಿ ನೀಡಿತ್ತು.

ರೆಡ್ಡಿ ಅವರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ಎಂಬ ಹೊಸ ರಾಜಕೀಯ ಪಕ್ಷವನ್ನು ಪ್ರಾರಂಭಿಸಿದ್ದರು ಮತ್ತು ಗಂಗಾವತಿ ಕ್ಷೇತ್ರದಿಂದ 65,791 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅನ್ಸಾರಿ 57,674 ಮತ್ತು ಬಿಜೆಪಿಯ ಪರಣ್ಣ ಮುನವಳ್ಳಿ 29,918 ಮತಗಳನ್ನು ಪಡೆದಿದ್ದರು. ಈ ಮೂಲಕ ರಾಜಕೀಯದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದ ರೆಡ್ಡಿಗೆ ಈ ಬೆಳವಣಿಗೆ ಹಿನ್ನಡೆಯಾಗಿದೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು