News Karnataka Kannada
Sunday, May 12 2024
ಕೊಪ್ಪಳ

ಕೊಪ್ಪಳ: ಸ್ಕಾರ್ಪಿಯೊಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಐವರು ಸಾವು

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಮದೇನೂರು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಎಲೆಕ್ಟ್ರಿಕ್ ಪೋಲ್‌ಗೆ ಡಿಕ್ಕಿ ಹೊಡೆದು, ರಸ್ತೆ ಬದಿಯ ರೈತನ ಜಮೀನಿಗೆ ಬಿದ್ದಿದೆ.
Photo Credit : Freepik

ಕೊಪ್ಪಳ: ಸ್ಕಾರ್ಪಿಯೊಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ್ದಿದ್ದು, ಈ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ತಡರಾತ್ರಿ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪೂರ ಬಳಿ ನಡೆದಿದೆ.

ಯಲಬುರ್ಗಾ ತಾಲೂಕಿನ ಬಿನ್ನಾಳ ಗ್ರಾಮದ ದೇವಪ್ಪ ಕೊಪ್ಪದ(62), ಮೃತರ ಸೊಸೆ ಗಿರಿಜಮ್ಮ(45), ಅಣ್ಣನ ಮಕ್ಕಳಾದ ಶಾಂತಮ್ಮ(35), ಪಾರ್ವತಮ್ಮ(32), ಸಂಬಂಧಿ ಕಸ್ತೂರಮ್ಮ(20) ಮೃತರು ಎಂದು ಗುರುತಿಸಲಾಗಿದೆ.

ಚಾಲಕ ಹರ್ಷವರ್ಧನ, ಮಕ್ಕಳಾದ ಬಸವರಾಜ, ಪುಟ್ಟರಾಜ, ಭೂಮಿಕಾ ಜಿಲ್ಲಾಸ್ಪತ್ರೆಗೆ ರವಾನೆ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸ್ಕಾರ್ಪಿಯೋ ವಾಹನದಲ್ಲಿ ಒಟ್ಟು 9 ಜನರು  ಪ್ರಯಾಣಿಸುತ್ತಿದ್ದರು. ಸ್ಥಳಕ್ಕೆ ಕುಕನೂರು ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು