News Karnataka Kannada
Friday, May 03 2024
ಕೊಪ್ಪಳ

ಬಿಜೆಪಿ ಅಪಪ್ರಚಾರದ ನಡುವೆ ಪ್ರೀತಿಯ ರಾಜಕಾರಣ ಗೆಲ್ಲಿಸಿದ ಮತದಾರ: ಶಾಸಕ ರಾಜೇಗೌಡ

Congress MLA
Photo Credit :

ಕೊಪ್ಪ: ಕಳೆದ ಬಾರಿ ಕೊರೊನಾ ಮತ್ತು ಅತಿವೃಷ್ಟಿ ಸಂದರ್ಭವನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕ್ಷೇತ್ರದಲ್ಲಿ ವಿರೋಧ ಪಕ್ಷದ ಶಾಸಕನಾಗಿ ಇದ್ದುಕೊಂಡು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ ಎಂದು ಶಾಸಕ ಟಿ.ಡಿ. ರಾಜೇಗೌಡ ಸ್ಮರಿಸಿದರು. ಪಟ್ಟಣದ ತಮ್ಮ ಸಮರ್ಪಣ ಶಾಸಕರ ಕಚೇರಿ ಉದ್ಘಾಟಿಸಿದ ನಂತರ ಸುದ್ಧಿಗೋಷ್ಠಿ ಯಲ್ಲಿ ಮಾತನಾಡಿದ ಅವರು ಕಳೆದ ಬಾರಿ ಬಿಜೆಪಿಯವರ ನಿರಂತರ ಅಪಪ್ರಚಾರ, ಚುನಾವಣಾ ಸಂದರ್ಭದಲ್ಲಿ ಕ್ಷೇತ್ರದಲ್ಲಿ ಹರಿಸಿದ ಭ್ರಷ್ಟಾಚಾರದ ಹಣದ ಹೊಳೆ ಇದೆಲ್ಲದರ ನಡುವೆಯೂ ಕ್ಷೇತ್ರದ ಜನತೆ ಪ್ರೀತಿಯ ರಾಜಕಾರಣದ ಕೈ ಹಿಡಿದಿದ್ದಾರೆ. ಕಳೆದ ಬಾರಿ ಕ್ಷೇತ್ರದಲ್ಲಿ ಅಭಿವೃದ್ಧಿಗಳಾಗಿ ದ್ದರೂ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿಯಾಗಿಲ್ಲ. ಈ ಬಾರಿ ರಾಜ್ಯದಲ್ಲಿ ನಮ್ಮದೇ ಕಾಂಗ್ರೆಸ್   ಸರ್ಕಾರವಿದ್ದು ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದರು.

ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧಿಕಾರವಹಿ ಸಿಕೊಂಡ ಪ್ರಥಮ ಕ್ಯಾಬಿನೆಟ್ ಸಭೆಯ ಲ್ಲಿಯೇ ಚುನಾವಣಾ ಪೂರ್ವದಲ್ಲಿ ನೀಡಿರುವ ಭರವಸೆ ಈಡೇರಿಸಿದ್ದಾರೆ. ದಿಟ್ಟನಿರ್ಧಾರಗಳನ್ನು ತೆಗೆದುಕೊಳ್ಳ ಲಾಗಿದೆ. ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಬೂತ್ ಮಟ್ಟದಲ್ಲಿ ಜನಜಾಗೃತಿ ಮೂಡಿಸಲಾ ಗುವುದು. ಜಾತಿ ಪಕ್ಷ ಬೇಧಗಳಿಲ್ಲದೆ ಅರ್ಹ ಫಲಾನುಭವಿ ಗಳನ್ನು ಗುರುತಿಸಿ ಸೌಲಭ್ಯ ನೀಡಲಾಗು ವುದು. ಮಲೆನಾಡು ಭಾಗಕ್ಕೆ ಅವಶ್ಯವಿರುವ ಅರಣ್ಯ ವ್ಯವಸ್ಥಾಪನಾ ಕಚೇರಿಯನ್ನು ಕೊಪ್ಪ ಪಟ್ಟಣಕ್ಕೆ ತರಲು ಪ್ರಯತ್ನಿಸಲಾಗುವುದು ಎಂದರು.

ಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಮುರೊಳ್ಳಿ ಮಾತನಾಡಿ ಜಿಲ್ಲೆಯಲ್ಲಿ ಬಿಜೆಪಿಯವರ ಭ್ರಷ್ಟಾಚಾರ ಹಾಗೂ ಮಿತಿಮೀರಿದ ಅಹಂಕಾರಕ್ಕೆ ಜನತೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮೂಲಕ ಬಿಜೆಪಿಗೆ ಪಾಠ ಕಲಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಅಂಶುಮಂತ್‌ರವರ ಪ್ರಾಮಾಣಿಕ ಪ್ರಯತ್ನದಿಂದ ಜಿಲ್ಲೆಯ ಎಲ್ಲಾ 5 ಸ್ಥಾನಗಳನ್ನು ಕಾಂಗ್ರೆಸ್ಸಿಗೆ ತಂದು ಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕ್ಷೇತ್ರದ ಬಿಜೆಪಿ ಮಾಜಿ ಶಾಸಕರು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯವರ ಮನೆಯಿರುವ ಬೂತ್‌ನಲ್ಲಿಯೇ ಜನ ಕಾಂಗ್ರೆಸ್‌ಗೆ 3 ಮತಗಳ ಲೀಡ್ ನೀಡುವ ಮೂಲಕ ಬಿಜೆಪಿ ಜನವಿರೋಧಿ ಅಲೆಯನ್ನು ಸ್ಪಷ್ಟಪಡಿಸಿದ್ದಾರೆ. ಸರ್ಕಾರಿ ಯೋಜಗಳನ್ನು ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷದವರು ಪಡೆದು ಕೊಳ್ಳಬಹುದು. ಕಾಂಗ್ರೆಸ್ ಪಕ್ಷಬೇಧ ಮಾಡುವುದಿಲ್ಲ ಎಂದರು.

ಜಿಲ್ಲಾಧ್ಯಕ್ಷ ಡಾ.ಅಂಶುಮಂತ್ ಮಾತನಾಡಿ ಕಾಂಗ್ರೆಸ್ ಜನಪರವಾಗಿರುವ ಪಕ್ಷ. ಪ್ರಣಾಳಿಕೆಯನ್ನು ಸಮರ್ಪಕ ಅನುಷ್ಠಾನ ಹಾಗೂ ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಜನರಿಗೆ ಮನವರಿಕೆ ಮಾಡಿ ಕೊಡಲು ಜಿಲ್ಲೆಯ 5 ಕ್ಷೇತ್ರಗಳಲ್ಲಿ ಜನಜಾಗೃತಿ ಕಾರ್ಯಕ್ರಮ ಮಾಡುತ್ತೇವೆ ಎಂದರು.
ಖಾಸಗಿ ಕಾರ್ಯಕ್ರಮಕ್ಕೆ ಕೊಪ್ಪಕ್ಕೆ ಆಗಮಿಸಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇ ಗೌಡರವರು ಶಾಸಕರ ಕಚೇರಿಗೆ ಆಗಮಿಸಿ ರಾಜೇಗೌಡರಿಗೆ ಶುಭ ಹಾರೈಸಿದರು. ಶೃಂಗೇರಿ ಕ್ಷೇತ್ರ ಚುನಾವಣಾ ಸಮಿತಿ ಉಸ್ತುವಾರಿ ಉಪಾಧ್ಯಕ್ಷ ಓಣಿತೋಟ ರತ್ನಾಕರ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷೆ ಅನ್ನಪೂರ್ಣ ನರೇಶ್, ಚಿಂತನ್ ಬೆಳಗೊಳ, ಪ.ಪಂ ಸದಸ್ಯರಾದ ಮೈತ್ರಾ ಗಣೇಶ್, ರಶೀದ್, ತ್ವಹೀದ್ ಮುಂತಾದವರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು