News Karnataka Kannada
Monday, April 29 2024
ಕಲಬುರಗಿ

ಬಿಜೆಪಿಯ ಕೆಲ ಹಾಲಿ ಸಂಸದರು ನಮ್ಮ ಸಂಪರ್ಕದಲ್ಲಿದ್ದಾರೆ : ಡಿ.ಕೆ. ಶಿ

ಕಾಂಗ್ರೆಸ್ ಸೇರ್ಪಡೆಯಾಗಲು ಬಿಜೆಪಿಯ ಕೆಲ ಹಾಲಿ ಸಂಸದರು ಬಯಸಿದ್ದು, ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ನಗರದ ಐವಾನ್ ಇ ಶಾಹಿ ಅತಿಥಿ ಗೃಹದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ನಾಯಕರು ನಮ್ಮೊಂದಿಗೆ ಸಂಪರ್ಕ ಹೊಂದಿದ್ದು, ಬಹಳಷ್ಟು ಜನ ನಮ್ಮನ್ನು ಭೇಟಿಯಾಗಿದ್ದಾರೆ.ಅವರ ಹೆಸರು ನಾನು ಬಹಿರಂಗ ಪಡಿಸುವುದಿಲ್ಲ ಎಂದರು.
Photo Credit : News Kannada

ಕಲಬುರಗಿ:  ಕಾಂಗ್ರೆಸ್ ಸೇರ್ಪಡೆಯಾಗಲು ಬಿಜೆಪಿಯ ಕೆಲ ಹಾಲಿ ಸಂಸದರು ಬಯಸಿದ್ದು, ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ನಗರದ ಐವಾನ್ ಇ ಶಾಹಿ ಅತಿಥಿ ಗೃಹದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ನಾಯಕರು ನಮ್ಮೊಂದಿಗೆ ಸಂಪರ್ಕ ಹೊಂದಿದ್ದು, ಬಹಳಷ್ಟು ಜನ ನಮ್ಮನ್ನು ಭೇಟಿಯಾಗಿದ್ದಾರೆ.ಅವರ ಹೆಸರು ನಾನು ಬಹಿರಂಗ ಪಡಿಸುವುದಿಲ್ಲ ಎಂದರು.

ನಿನ್ನೆ ಜಯಪ್ರಕಾಶ್ ಹೆಗಡೆ, ಎಂ.ಪಿ.ಕುಮಾರಸ್ವಾಮಿ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗಿದ್ದಾರೆ. ಅಲ್ಲದೆ, ಬಿಜೆಪಿಯ ಹಾಲಿ ಸಂಸದ ಸದಾನಂದ ಗೌಡ ಪಕ್ಷಕ್ಕೆ ಸೇರ್ಪಡೆಯಾದರೆ ಸ್ವಾಗತ ಮಾಡುತ್ತೇವೆ ಎಂದು ಎಂದು ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲಲಿದೆ. ಬಿಜೆಪಿಗೆ ಆಡಳಿತ ವಿರೋಧಿ ಅಲೆ ಕಾಡುತ್ತಿದೆ. ಅದಕ್ಕಾಗಿಯೇ ಬಿಜೆಪಿಯು ಹಾಲಿ 10 ಮಂದಿ ಸಂಸದರನ್ನು ಬದಲಾವಣೆ ಮಾಡುತ್ತಿದ್ದಾರೆ. ಬಿಜೆಪಿಯವರು ಜನರಿಗೆ ಸ್ಪಂದಿಸಿಲ್ಲ ಎಂದು ದೂರಿದರು.

ಬೆಂಗಳೂರು ಸೇರಿದಂತೆ ಹಲವಡೆ ಕುಡಿಯುವ ನೀರಿನ ಸಮಸ್ಯೆಯಾಗುತ್ತಿದೆ. ನಗರದಲ್ಲಿ 70 ಬೋರ್ ವೆಲ್ ಬತ್ತಿ ಹೋಗಿವೆ. ಆದರೂ ಕೂಡ ಕಾವೇರಿ ನೀರು ಸಮರ್ಪಕವಾಗಿ ಸರಬರಾಜು ಮಾಡಲಾಗುತ್ತದೆ. ಯಾರಿಗೂ ತೊಂದರೆಯಾಗದಂತೆ ನೋಡಿಕೊಳ್ಳಲುಸೂಚಿಸಿದ್ದೆವೆ ಎಂದು ಹೇಳಿದರು.

ಸಂಸದ ಅನಂತಕುಮಾರ್​ ಹೆಗಡೆ ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡುತ್ತಾರೆ. ಇದಕ್ಕೆ ಮೋದಿಯವರು ಇಲ್ಲಿಯವರೆಗೆ ಮಾತನಾಡಿಲ್ಲ. ಅದರ ಅರ್ಥ ಮೌನಂ ಸಮ್ಮತಿ ಲಕ್ಷಣಂ ಅಂತ. ಹೆಗಡೆಯವರ ಹೇಳಿಕೆ, ಬಿಜೆಪಿ ಹೇಳಿಕೆಯಾಗಿದೆ ಎಂದು ವಾಗ್ದಾಳಿ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು