ಕಲಬುರಗಿ: ಕಲಬುರಗಿ ಜಿಲ್ಲೆ ಭಾರಿ ಮಳೆಯಾಗಿದ್ದು, ಕಾಳಗಿ ತಾಲೂಕಿನ ಕೊರವಿ ಗ್ರಾಮದಲ್ಲಿ ಮಳೆಯಿಂದ ಮನೆ ಗೋಡೆ ಕುಸಿದು 80ಕ್ಕೂ ಅಧಿಕ ಕುರಿ, ಮೇಕೆ ಮೃತಪಟ್ಟಿವೆ.
ಮಲ್ಲಪ್ಪ ಪೂಜಾರಿ, ಅಣ್ಣಪ್ಪ ಪೂಜಾರಿ ಎಂಬುವರಿಗೆ ಸೇರಿದ ಕುರಿ, ಮೇಕೆಗಳು ರಾತ್ರಿ ಸುರಿದ ಮಳೆಗೆ ಗೋಡೆ ಕುಸಿದು ಮೃತಪಟ್ಟಿವೆ. ಲಕ್ಷಾಂತರ ಮೌಲ್ಯದ ಕುರಿ, ಮೇಕೆ ಕಳೆದುಕೊಂಡು ಕುಟುಂಬಗಳು ಕಂಗಾಲಾಗಿವೆ.