Categories: ಕಲಬುರಗಿ

ಬಿಜೆಪಿಯ ಆಳಂದ ರಥಯಾತ್ರೆಗೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್

ಕಲಬುರಗಿ: ಆಳಂದ ಪಟ್ಟಣದ ಪ್ರಸಿದ್ಧ ಸೂಫಿ ಸಂತ ಹಜರತ್ ಲಾಡ್ಲೆ ಮಶಾಖ್ (ರ.ಅ) ದರ್ಗಾದ ಆವರಣದಲ್ಲಿದೆ ಎನ್ನಲಾಗುತ್ತಿರುವ ರಾಘವ ಚೈತನ್ಯ ಲಿಂಗದ ಪೂಜೆಗಾಗಿ ಬಿಜೆಪಿ ಹಮ್ಮಿಕೊಂಡಿರುವ ರಥಯಾತ್ರೆಗೆ ಹೈಕೋರ್ಟ್ ನ ಕಲಬುರಗಿ ಪೀಠ ಶುಕ್ರವಾರ ಷರತ್ತುಬದ್ಧ ಅನುಮತಿ ನೀಡಿದೆ.

ನರೋಣ ಗ್ರಾಮದಿಂದ ಆಳಂದ ಪಟ್ಟಣದ ದರ್ಗಾದ ವರೆಗೆ ಹಮ್ಮಿಕೊಂಡಿರುವ ರಥಯಾತ್ರೆಗೆ ಜಿಲ್ಲಾಡಳಿತ ಕಾನೂನು ಸುವ್ಯವಸ್ಥೆ ಹಿತ ದೃಷ್ಟಿಯಿಂದ ಅನುಮತಿ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಆಳಂದ ಮತಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ ಅವರ ಪುತ್ರರಾದ ಹರ್ಷನಂದ ಗುತ್ತೇದಾರ, ಹಿಂದೂ ಜಾಗರಣ ವೇದಿಕೆಯ ನಾಗೇಂದ್ರ ಕಬಾಡೆ ಹಾಗೂ ಎಸ್.ಎ ಪಾಟೀಲ್ ಅವರನ್ನೊಳಗೊಂಡ ಮೂವರು ಅರ್ಜಿದಾರರು ಉಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ ಕಲಬುರಗಿ ಪೀಠ, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದ ರೀತಿಯಲ್ಲಿ ಶಾಂತಿಯುತವಾಗಿ ರಥಯಾತ್ರೆ ನಡೆಸಲು ಪ್ರಮುಖ ಐದು ಷರತ್ತುಗಳನ್ನು ವಿಧಿಸಿ ಅವಕಾಶ ನೀಡಿದೆ.

ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಪ್ರದೇಶಗಳಲ್ಲಿ ರಥಯಾತ್ರೆ ನಡೆಸಬಾರದು. ವಿಶೇಷವಾಗಿ ಮಸೀದಿ ಮತ್ತು ಚರ್ಚ್ ಇರುವ ಮಾರ್ಗದಲ್ಲಿ ನಡೆಸದಂತೆ ಮತ್ತು ರಥಯಾತ್ರೆವೇಳೆ ಬೇರೆ ಧಾರ್ಮಿಕ ಸಮುದಾಯಗಳ ಭಾವನೆಳಿಗೆ ಧಕ್ಕೆ ಉಂಟುಮಾಡುವ ಘೋಷಣೆಗಳು ಕೂಗದೆ ಶಾಂತಿ ಸುವ್ಯವಸ್ಥೆ ಕಾಪಾಡಿಕೊಂಡು ರಥಯಾತ್ರೆ ನಡೆಸಬೇಕೆಂದು ತಿಳಿಸಿದೆ.

ಯಾತ್ರೆ ನಡೆಸುವ ಆಯೋಜಕರಿಂದ ಈ ಕುರಿತು ಜಿಲ್ಲಾಡಳಿತ ಮುಚ್ಚಳಿಕೆ ಪಡೆದು ಅದರೊಂದಿಗೆ ಅವರ ವಿಳಾಸದ ದಾಖಲೆ ಮತ್ತು ಆಧಾರ್ ಕಾರ್ಡ್, ಮೊಬೈಲ್ ಹಾಗೂ ದೂರವಾಣಿ ಸಂಖ್ಯೆ ಪಡೆಯಬೇಕೆಂದು ನ್ಯಾಯಲಯ ತನ್ನ ಆದೇಶದಲ್ಲಿ ಸೂಚಿಸಿದೆ.

ಜನಸಾಮಾನ್ಯರ ಸಂಚಾರಕ್ಕೆ ಅಡ್ಡಿಯಾಗದಂತೆ ಸೂರ್ಯಾಸ್ತಮಾನಕ್ಕೆ ಮುನ್ನವೇ ರಥಯಾತ್ರೆ ಕೈಬಿಡಬೇಕು. ಡಿಜೆ ಮತ್ತು ಮ್ಯೂಜಿಕ್ ಸಿಸ್ಟಮ್ ಹಾಕಬಾರದು, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಶಾಂತಿಯುತವಾಗಿ ರಥಯಾತ್ರೆ ನಡೆಸಬೇಕೆಂದು ಸೂಚನೆ ನೀಡಿ ಆದೇಶಿಸಿದೆ.

Nisarga K

Recent Posts

ಹೈಕೋರ್ಟ್​ ವಕೀಲೆ ಚೈತ್ರಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಹೈಕೊರ್ಟ್‌ನ ಅಡ್ವೋಕೇಟ್ ಅನುಮಾನಾಸ್ಪದವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಸಂಜಯನಗರ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚೈತ್ರಾ ಬಿ.ಗೌಡ…

2 mins ago

ಸೆಕೆಂಡ್ ​ಹ್ಯಾಂಡ್ ಕಾರು ವ್ಯಾಪಾರಿ ಮೇಲೆ ಹಲ್ಲೆ: ಆರೋಪಿಗಳ ಬಂಧನ

ಹಣಕ್ಕೆ ಬೇಡಿಕೆ ಇಟ್ಟು ನಗರದ ಹಾಗರಗಾ ಕ್ರಾಸ್ ಬಳಿಯ ಮನೆಯೊಂದರಲ್ಲಿ  ಸೆಕೆಂಡ್​ ಹ್ಯಾಂಡ್ ಕಾರು ವ್ಯಾಪಾರಿಯನ್ನು ಬೆತ್ತಲೆ ಮಾಡಿ ಹಲ್ಲೆ…

11 mins ago

ಹೈಕೋರ್ಟ್ ಅಡ್ವೋಕೇಟ್ ಚೈತ್ರಾ ಬಿ.ಗೌಡ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಹೈಕೋರ್ಟ್ ಅಡ್ವೋಕೇಟ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಂಜಯನಗರ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

11 mins ago

ಘಟ್ಟದ ಮೇಲಿನ ಶಾಸಕರನ್ನ ಅವಮಾನಿಸಿದ ಕರಾವಳಿಯ ಶಾಸಕ

ಘಟ್ಟದ ಕಡೆಗಳಲ್ಲಿ ರಸ್ತೆಗಳಿಗೆ ಎರಡು ಹಂಪ್ ಗಳನ್ನ ಹಾಕಿದ್ರೆ ಅಚೀವ್ ಮೆಂಟ್ ಅಂತೆ' ಘಟ್ಟದ ಮೇಲೆ‌ ಶಾಸಕರ ಅಚೀವ್ ಮೆಂಟ್…

21 mins ago

ಮೋದಿ ಪ್ರಧಾನ ಮಂತ್ರಿ ಅಲ್ಲ, ರಾಜ ಎಂದ ರಾಹುಲ್

ನಾನು ನಿಜವನ್ನೇ ಹೇಳುತ್ತಿದ್ದೇನೆ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿ ಅಲ್ಲ ಬದಲಾಗಿ ಅವರು ರಾಜರು ಎಂದು ರಾಹುಲ್‌ ಗಾಂಧಿ ಹೇಳಿದರು.

25 mins ago

ಎಂ.ಸಿ. ಸಿ. ಬ್ಯಾಂಕಿನ ನೂತನ ಆಡಳಿತ ಕಛೇರಿ ಉದ್ಘಾಟನೆ, 112ನೇ ಸ್ಥಾಪಕರ ದಿನಾಚರಣೆ

ಎಂಸಿ.ಸಿ. ಬ್ಯಾಂಕಿನ ನೂತನ ನವೀಕೃತ ಅತ್ಯಾಧುನಿಕ ಸುಸಜ್ಜಿತ ಆಡಳಿತ ಕಛೇರಿಯ ಉದ್ಘಾಟನೆ ಹಾಗೂ ಬ್ಯಾಂಕಿನ 112ನೇ ಸಂಸ್ಥಾಪಕರ ದಿನಾಚರಣೆಯ ಸಮಾರಂಭ…

31 mins ago