News Karnataka Kannada
Tuesday, April 30 2024
ರಾಯಚೂರು

ಒಂದೇ ಕುಟುಂಬದ 3 ಜನರ ಕೊಲೆ

Murder
Photo Credit :

ರಾಯಚೂರು :  ನಗರದ ಹೊರವಲಯದ ಯರಮರಸ್ ಕ್ಯಾಂಪ್ ನಲ್ಲಿ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಮೂವರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಅಳಿಯ ಸಾಯಿ ಎಂಬಾತನಿಂದ ಈ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಸಂತೋಷಿ(45) ವೈಷ್ಣವಿ(18) ಮತ್ತು ಆರತಿ(16) ಕೊಲೆಯಾದವರು ಎಂದು ಗುರುತಿಸಲಾಗಿದೆ. ಕಳೆದ ಆರು ತಿಂಗಳ ಹಿಂದೆಯಷ್ಟೇ ವೈಷ್ಣವಿ ಅವರಿಗೆ ತೆಲಂಗಾಣದ ಹೈದಾರಾಬಾದ್​ ಮೂಲದ ಸಾಯಿ ಎಂಬಾತನೊಂದಿಗೆ ಕುಟುಂಬಸ್ಥರು ಮದುವೆ ಮಾಡಿಕೊಟ್ಟಿದ್ದರು. ಆದರೆ, ಮದುವೆ ಆದ ದಿನದಿಂದಲೂ ಅಳಿಯ ಸಾಯಿ ಹೆಂಡತಿ ಕುಟುಂಬದೊಂದಿಗೆ ಜಗಳ ಮಾಡುತ್ತಿದ್ದ ಎನ್ನಲಾಗಿದೆ

ಮಂಗಳವಾರ ರಾತ್ರಿ ಕೂಡ ಅಳಿಯನೇ ಮನೆಗೆ ಬಂದು ಅತ್ತೆ, ಹೆಂಡತಿ ಹಾಗೂ 16 ವರ್ಷದ ಆರತಿಯನ್ನು ಕೊಲೆ ಮಾಡಿರುವ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ರಾಯಚೂರು ಗ್ರಾಮೀಣ ಪೊಲೀಸರು ದೌಡಾಯಿಸಿದ್ದಾರೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿ ಬಾಬು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಡಾಗ್ ಸ್ವ್ಕಾಡ್​​ ಕೂಡ ಆಗಮಿಸಿದ್ದು, ಸ್ಥಳ ಪರಿಶೀಲನೆ ನಡೆಸಿದ್ದು, ಎಫ್.ಎಸ್.ಎಲ್ ತಂಡ ಹೆಚ್ಚಿನ ಪರಿಶೀಲನೆ ನಡೆಸುತ್ತಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು