Categories: ರಾಯಚೂರು

ಕೃಷ್ಣಾನದಿ ನಡುಗಡ್ಡೆಯಲ್ಲಿ ಸಿಲುಕಿದ್ದ ಮೂವರ ರೈತರ ರಕ್ಷಣೆ

ರಾಯಚೂರು: ಪ್ರವಾಹದಿಂದಾಗಿ ಲಿಂಗಸುಗೂರು ತಾಲ್ಲೂಕಿನ ಕೃಷ್ಣಾನದಿ ನಡುಗಡ್ಡೆಯಲ್ಲಿ ಸಿಲುಕಿದ್ದ ಮೂವರು ರೈತರನ್ನು ಎನ್ ಡಿ ಆರ್ ಎಫ್ ಹಾಗೂ ಎಸ್ ಟಿ ಆರ್ ಎಫ್ ತಂಡದವರು ಶನಿವಾರ ರಾತ್ರಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.

ಸಂಕಷ್ಟಕ್ಕೆ ಸಿಲುಕಿದ ರೈತರನ್ನು ನಿರುಪಾದಪ್ಪ, ಹುಲಗಪ್ಪ ಹಾಗೂ ದುರುಗಪ್ಪ ಎಂದು ಗುರುತಿಸಲಾಗಿದ್ದು ಇದೀಗ ಸುರಕ್ಷಿತವಾಗಿದ್ದಾರೆ. ತವದಗಡ್ಡಿಯಲ್ಲಿದ್ದ ಜಮೀನಿನಲ್ಲಿ ಕೃಷಿಕಾರ್ಯಕ್ಕಾಗಿ ಶುಕ್ರವಾರ ಬೆಳಿಗ್ಗೆ ರೈತರು ಹೋಗಿದ್ದರು. ಆದರೆ ಪ್ರವಾಹದ ಮಟ್ಟ ಏರಿಕೆಯಾದ ಹಿನ್ನೆಲೆ ಈಜಲು ಯತ್ನಿಸಿದರೂ ಹೊರಬರಲು ಸಾಧ್ಯವಾಗಿರಲಿಲ್ಲ. ಈ ಸಂಬಂಧ ತಹಶೀಲ್ದಾರ್ ಅವರಿಗೆ ಈ ಬಗ್ಗೆ ಸಂಬಂಧಿಗಳು ಮಾಹಿತಿ ನೀಡಿದ್ದರು.

ರೈತರು ನಡುಗಡ್ಡೆಯಲ್ಲಿ ಸಿಲುಕಿರುವ ಬಗ್ಗೆ ಶನಿವಾರ ರಾತ್ರಿ 9 ಗಂಟೆಗೆ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಮಾಹಿತಿ ತಲುಪಿತು.

ಕೂಡಲೇ ನದಿತೀರದತ್ತ ಕಾರ್ಯಾಚರಣೆಗಾಗಿ ರಾತ್ರಿಯೇ ಧಾವಿಸಲು ಸೂಚಿಸಲಾಯಿತು. 10 ಗಂಟೆಯಿಂದ ಯೋಜನೆ ರೂಪಿಸಿಕೊಂಡು, ಕಾರ್ಯಾಚರಣೆ ಆರಂಭಿಸಿದ ಪ್ರವಾಹ ನಿರ್ವಹಣಾ ತಂಡದವರು ರೈತರನ್ನು ರಾತ್ರಿ 11.50 ಕ್ಕೆ ಯಂತ್ರಚಾಲಿತ ಬೋಟ್ ನಲ್ಲಿ ಕರೆತಂದರು.

Sampriya YK

Recent Posts

ಬಸವೇಶ್ವರ ಜಾತ್ರೆ: ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

ಜಿಲ್ಲೆಯ ಸೊನ್ನ ಗ್ರಾಮದ ಶಿವುಕುಮಾರ ಮಾಸ್ತಾರ ದಂಪತಿಗಳ ಸಹಾಯಾರ್ಥದೊಂದಿಗೆ ಗ್ರಾಮದ ಸುಮಾರು 200 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ವಿಶ್ವರಾಧ್ಯ…

1 min ago

ಬಿಜೆಪಿ ಮತ್ತೆ ಗೆದ್ದರೆ ವಿಪಕ್ಷಗಳ ನಾಯಕರು ಜೈಲು ಪಾಲಾಗುತ್ತಾರೆ: ಕೇಜ್ರಿವಾಲ್‌

ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯು ಬಿಜೆಪಿ ಗೆದ್ದರೆ, ಮಮತಾ ಬ್ಯಾನರ್ಜಿ, ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ, ಆರ್‌ಜೆಡಿ ನಾಯಕ ತೇಜಸ್ವಿ…

5 mins ago

ದೆಹಲಿಯಲ್ಲಿ ಬಿರುಗಾಳಿ: ಇಬ್ಬರು ಮೃತ್ಯು, 23 ಮಂದಿಗೆ ಗಾಯ

ಬಿರುಗಾಳಿಗೆ ಇಬ್ಬರು ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

29 mins ago

ಹೆಚ್ಚಿನ ಫೀಸ್ ತೆಗೆದುಕೊಂಡರೆ ಖಾಸಗಿ ಶಾಲೆಗಳ ವಿರುದ್ಧ ಕ್ರಮ : ಬಂಗಾರಪ್ಪ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಪೋಷಕರು ತಮ್ಮ ಮಕ್ಕಳಿಗೆ ಮುಂದಿನ ವಿದ್ಯಾಭ್ಯಸದ ಬಗ್ಗೆ ಈಗಾಗಲೇ ಯೋಚಿಸುತ್ತಿದ್ದಾರೆ

37 mins ago

ವಿದ್ಯಾರ್ಥಿನಿಯ ಹತ್ಯೆ ಪ್ರಕರಣ: ಮರದ ಮೇಲೆ ಬಾಲಕಿಯ ರುಂಡ ಪತ್ತೆ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಬಾಲಕಿ ರುಂಡ ಪತ್ತೆಯಾಗಿದೆ

43 mins ago

ಸೆಕೆಂಡ್ ​ಹ್ಯಾಂಡ್ ಕಾರು ವ್ಯಾಪಾರಿ ಮೇಲೆ ಹಲ್ಲೆ: ಆರೋಪಿಗಳ ಬಂಧನ

ಹಣಕ್ಕೆ ಬೇಡಿಕೆ ಇಟ್ಟು ನಗರದ ಹಾಗರಗಾ ಕ್ರಾಸ್ ಬಳಿಯ ಮನೆಯೊಂದರಲ್ಲಿ  ಸೆಕೆಂಡ್​ ಹ್ಯಾಂಡ್ ಕಾರು ವ್ಯಾಪಾರಿಯನ್ನು ಬೆತ್ತಲೆ ಮಾಡಿ ಹಲ್ಲೆ…

60 mins ago