News Karnataka Kannada
Sunday, April 28 2024
ರಾಯಚೂರು

ಬಿಜೆಪಿಯ ಇಬ್ಬರು ನಾಯಕರು ಸಚಿವ ಸ್ಥಾನ ತಪ್ಪಿಸಿದ್ದಾರೆ ಎಂದ ಶಾಸಕ ಶಿವನ ಗೌಡ ಪಾಟೀಲ್‌

Shivanagowda Nayak
Photo Credit :

ರಾಯಚೂರು: ಮುಖ್ಯ ಮಂತ್ರಿ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ರಾಯಚೂರು ಜಿಲ್ಲೆಗೆ ಪ್ರಾತಿನಿಧ್ಯ ಕೊಡದೇ ಅನ್ಯಾಯ ಮಾಡಿದ್ದಾರೆ ಎಂದು ದೇವದುರ್ಗ ಶಾಸಕ ಶಿವನಗೌಡ ನಾಯಕ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನನಗಾದ ಅನ್ಯಾಯಕ್ಕೆ ಪಕ್ಷದ ಚೌಕಟ್ಟಿನಲ್ಲಿ ಹೋರಾಟವನ್ನ ಮಾಡುತ್ತೇನೆ ಎಂದಿದ್ದಾರೆ.
ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ನಾಯಕರಿಂದ ಸ್ಥಾನಮಾನ ಸಿಕ್ಕಿತ್ತು. ಆದರೆ ರಾಜ್ಯದ ಕೆಲ ಹಿರಿಯ ನಾಯಕರು ಬೇಕಂತಲೇ ಸ್ಥಾನಮಾನ ತಪ್ಪಿಸಿದ್ದಾರೆ. ಹಿರಿಯ ನಾಯಕರ ತುಳಿತಕ್ಕೊಳಗಾಗಿದ್ದೇನೆ. ಪರಿಶಿಷ್ಟ ಪಂಗಡದವನಾದ ನನಗೆ ದೊಡ್ಡ ಅನ್ಯಾಯವಾಗಿದೆ. ಪರಿಶಿಷ್ಟ ಪಂಗಡದವರು ಹಲವು ಶಾಸಕರಿದ್ದಾರೆ. ಕನಿಷ್ಠ ಮೂವರಿಗೆ ಸಚಿವ ಸ್ಥಾನ ನೀಡಬೇಕಿತ್ತು. ಸಾಮಾಜಿಕ ನ್ಯಾಯ ಸಿಕ್ಕಿಲ್ಲ, ಹದಿಮೂರು ಜಿಲ್ಲೆಗೆ ಅನ್ಯಾಯವಾಗಿದೆ ಎಂದರು. ಸಿಎಂ ಬಸವರಾಜ್ ಬೊಮ್ಮಾಯಿವರು ಮುಂದೆಯೂ ಮುಖ್ಯಮಂತ್ರಿಯಾಗಲಿದ್ದಾರೆ. ನಮಗೆ ಬೊಮ್ಮಾಯಿ ನ್ಯಾಯ ಒದಗಿಸಬೇಕು. ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನಕೊಟ್ಟರೆ ನಮ್ಮ ಸಮಾಜಕ್ಕೆ ಸಚಿವ ಸ್ಥಾನ ಕೊಟ್ಟ ಹಾಗೆ ಆಗುವುದಿಲ್ಲ. ಸರ್ಕಾರ ರಚನೆಗೆ ಅವರ ಶ್ರಮ ಪರಿಗಣಿಸಿ ಕೊಟ್ಟಂತಾಗುತ್ತದೆ ಸಮಾಜಕ್ಕೆ ನ್ಯಾಯ ಸಿಕ್ಕಂತಾಗುವುದಿಲ್ಲ ಅಂತ ಶಿವನಗೌಡ ನಾಯಕ್ ಬೇಸರ ಹೊರಹಾಕಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು