Categories: ರಾಯಚೂರು

ರಾಯಚೂರು: ನಿಂತಲ್ಲೇ ಸುಟ್ಟು ಕರಕಲಾದ ಶಾಲಾ ಓಮ್ನಿ ವ್ಯಾನ್‌

ರಾಯಚೂರು : ನಗರದ ರೈಲ್ವೆ ನಿಲ್ದಾಣದ ಆವರಣದಲ್ಲಿ ನಿಲುಗಡೆ ಮಾಡಲಾಗಿದ್ದ ಶಾಲಾ ಓಮ್ನಿ ವ್ಯಾನ್‌ ಇದ್ದಕ್ಕಿದ್ದಂತೆ ಹೊತ್ತಿ ಉರಿದು ಕೆಲಕಾಲ ಆತಂಕ ಸೃಷ್ಟಿಸಿದ ಘಟನೆ ಬುಧವಾರ ನಡೆಯಿತು. ದೇವದುರ್ಗ ತಾಲ್ಲೂಕು ಗೊಬ್ಬೂರ ಗ್ರಾಮದ ಖಾಸಗಿ ಶಾಲೆಯ ವ್ಯಾನ್‌ ಇದಾಗಿದ್ದು, ಬೆಂಕಿ ಅವಘಡದಿಂದ ಯಾವುದೇ ಜೀವಹಾನಿ ಸಂಭವಿಸಿಲ್ಲ.

ವ್ಯಾನ್‌ನಿಂದ ಹೊಗೆ ಬರುತ್ತಿರುವುದನ್ನು ಗಮನಿಸಿ ಚಾಲಕ ಹಾಗೂ ಕೆಲವು ಜನರು ನೀರು ಹಾಕಿ ನಂದಿಸಲು ಯತ್ನಿಸಿದ್ದಾರೆ. ರೈಲ್ವೆ ನಿಲ್ದಾಣದೊಳಗಿನಿಂದ ಮರಳು ಹಾಗೂ ಬೆಂಕಿನಂದಿಸುವ ಉಪಕರಣ ತಂದು ಹಾಕಲಾಗಿತ್ತು. ಆದರೂ ಇದ್ದಕ್ಕಿದ್ದಂತೆ ಬೆಂಕಿ ಕೆನ್ನಾಲಿಗೆ ಚಾಚಿ ವ್ಯಾನ್‌ ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳದ ವಾಹನವು ತಲುಪುವ ಮೊದಲೇ ವಾಹನ ಉರಿದುಹೋಗಿತ್ತು.

ರೈಲ್ವೆ ನಿಲ್ದಾಣದಲ್ಲಿ ಅನ್ಯ ಕೆಲಸದ ನಿಮಿತ್ತ ಶಾಲೆಯ ಮುಖ್ಯಸ್ಥರು ಬಂದಿದ್ದರು. ಈ ವೇಳೆ ಘಟನೆ ನಡೆದಿದೆ. ‘ವ್ಯಾನ್‌ ಬೇರೆಯವರಿಂದ ಖರೀದಿ ಮಾಡಿದ್ದೆ. ಇನ್ನೂ ದಾಖಲೆಗಳನ್ನು ಮಾಡಿಕೊಳ್ಳುವುದು ಬಾಕಿ ಇತ್ತು. ವ್ಯಾನ್‌ನಲ್ಲಿ ಏನಾಯಿತು ಗೊತ್ತಿಲ್ಲ. ಒಮ್ಮೇಲೆ ಉರಿದುಹೋಗಿದೆ. ಈ ಬಗ್ಗೆ ಪೊಲೀಸ್‌ ಠಾಣೆಗೆ ಇನ್ನೂ ದೂರು ಸಲ್ಲಿಸಿಲ್ಲ’ ಎಂದು ಶಾಲೆಯ ಮುಖ್ಯಸ್ಥ ರವಿ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ಇನ್ನೊಂದು ವಾಹನಕ್ಕೂ ಬೆಂಕಿ: ನಗರದ ಸೂಪರ್‌ ಮಾರ್ಕೆಟ್‌ನಲ್ಲಿ ಟಾಟಾ ಏಸ್‌ ವಾಹನಕ್ಕೆ ನಿಲುಗಡೆ ಮಾಡಿರುವ ಜಾಗದಲ್ಲೇ ಬೆಂಕಿ ಹೊತ್ತಿಕೊಂಡಿದ್ದ ಘಟನೆ ಕೂಡಾ ಬುಧವಾರವೇ ನಡೆದಿದೆ. ವಾಹನದ ಮುಂಭಾಗ ಮಾತ್ರ ಸುಟ್ಟುಹೋಗಿದೆ. ನೆರೆದಿದ್ದ ಜನರು ಕೂಡಲೇ ವಾಹನದ ಮೇಲೆ ಮಣ್ಣು ಹಾಗೂ ನೀರು ಸುರಿದು ಬೆಂಕಿ ನಂದಿಸಿದ್ದಾರೆ. ಯಾವುದೇ ಜೀವಹಾನಿಯಾಗಿಲ್ಲ. ಪ್ರಕರಣ ದಾಖಲಾಗಿಲ್ಲ.

Gayathri SG

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

19 mins ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

36 mins ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

48 mins ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

1 hour ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

2 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

3 hours ago