ರಾಯಚೂರು : ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ತಿಂಥಿಣಿನಿ ಸೇತುವೆ ಸಮೀಪ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗಲಗ ಗ್ರಾಮದ 40 ವರ್ಷದ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ. ಈತ ವಿವಾಹಿತೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಹಿನ್ನೆಲೆಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.
ಮದುವೆಯಾಗಿದ್ದರೂ ಈತ ವಿವಾಹಿತೆಯೊಂದಿಗೆ ಸಂಬಂಧ ಬೆಳೆಸಿ ಆಕೆಯೊಂದಿಗೆ ಬೆಂಗಳೂರಿನಲ್ಲಿ ವಾಸವಾಗಿದ್ದ. ಇತ್ತೀಚೆಗೆ ಗ್ರಾಮಕ್ಕೆ ಆಗಮಿಸಿದ್ದ ಆತನ ಮೇಲೆ ನಿಗಾ ವಹಿಸಿದ್ದ ದುಷ್ಕರ್ಮಿಗಳು ಹತ್ಯೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಜಾಲಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇವದುರ್ಗ ಸರ್ಕಾರಿ ಆಸ್ಪತ್ರೆಗೆ ಮೃತದೇಹ ಸಾಗಿಸಲಾಗಿದೆ.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ