ರಾಯಚೂರು: ರಾಯಚೂರು ಜಿಲ್ಲೆಯ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ಜನರು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ ಅನಾರೋಗ್ಯ ಪೀಡಿತರನ್ನು ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ ರಿಮ್ಸ್ ಮತ್ತು ಅರಕೇರಾ ಮತ್ತು ದೇವದುರ್ಗದ ಇತರ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.
ಸ್ವಚ್ಛ ನೀರು ನೀಡಲು ಗ್ರಾಮ ಪಂಚಾಯಿತಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸ್ಥಳೀಯ ಗ್ರಾಮಸ್ಥರು ಆರೋಪಿಸಿದ್ದಾರೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದಾರೆ. ಪೊಲೀಸರು ಕೂಡ ಗ್ರಾಮಕ್ಕೆ ಭೇಟಿ ನೀಡಿದ್ದು, ಅಧಿಕಾರಿಗಳು ಕುಡಿಯುವ ನೀರಿಗೆ ಪರ್ಯಾಯ ವ್ಯವಸ್ಥೆ ಮಾಡಿದ್ದಾರೆ.
ಕುಡಿಯುವ ನೀರಿಗೆ ತ್ಯಾಜ್ಯ ನೀರು ಸೇರಿಕೊಂಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ನಿಖರ ಕಾರಣ ತಿಳಿಯಲು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಜೂನ್ 2022 ರಲ್ಲಿ, ರಾಯಚೂರು ಪಟ್ಟಣದಲ್ಲಿ ಕಲುಷಿತ ನೀರು ಸೇವಿಸಿ ಮೂರು ಜನರು ಸಾವನ್ನಪ್ಪಿದರು ಮತ್ತು 23 ಮಕ್ಕಳು ಸೇರಿದಂತೆ 60 ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದರು. ಆಗ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಲುಷಿತ ನೀರು ಸೇವಿಸಿ ಮೃತಪಟ್ಟ ಮೂವರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದರು.
ಸಿನಿಮಾ ರಂಗದಲ್ಲಿ ಮತ್ತೊಂದು ವಿಚ್ಛೇದನ ಖಚಿತವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.
ವೆಸ್ಟ್ ನೈಲ್ ಫೀವರ್ ನ ಐದು ಪ್ರಕರಣಗಳು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ.
ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಗೆ ಆಗ್ರಹಿಸಿ 108-ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.
ನಗರದ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.
ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ…
ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.