ರಾಯಚೂರು: ರಾಯಚೂರಿನ ತುಗ್ಗಲದಿನ್ನಿ ಗ್ರಾಮದಲ್ಲಿರುವ ಆಂಜನೇಯ ಗುಡಿ ಪೂಜಾರಿಯ ಪತ್ನಿಗೆ ಮುಸ್ಲಿಂ ಯುವಕ ಮೆಸೇಜ್ ಮಾಡಿದ್ದಕ್ಕೆ ಹತ್ಯೆ ಮಾಡಿರುವ ಘಟನೆ ಇಂದು ನಡೆದಿದೆ.
ಖಾದರ್ ಭಾಷಾ (28) ಕೊಲೆಯಾದ ವ್ಯಕ್ತಿ. ಮಾರುತಿ ಆರೋಪಿಯಾಗಿದ್ದಾನೆ. ಪತ್ನಿ ಮೇಲೆ ಕಣ್ಣು ಹಾಕಿದ ಖಾದರ್ ಭಾಷಾನ ಕಣ್ಣು ಕಿತ್ತು ಹಾಕಿ, ಮುಖದ ಗುರುತು ಸಿಗದಂತೆ ಕೊಚ್ಚಿ ಕೊಲೆ ಮಾಡಲಾಗಿದೆ.
ಹನುಮ ಜಯಂತಿ ದಿನದಂದೆ ಬರ್ಬರವಾಗಿ ಕೊಲೆಗೈಯಲಾಗಿದೆ. ಇಬ್ಬರೂ ಮಸ್ಕಿ ತಾಲೂಕಿನ ಬಳಗಾನೂರು ಗ್ರಾಮದ ನಿವಾಸಿಗಳಾಗಿದ್ದಾರೆ. ಮಾರುತಿ ಕೊಲೆಗೈದು ತಾನೇ ಖುದ್ದಾಗಿ ಠಾಣೆಗೆ ಬಂದು ಶರಣಾಗಿದ್ದಾನೆ.
ಕೊಲೆಯಲ್ಲಿ 6 ರಿಂದ 7 ಜನ ಭಾಗಿಯಾಗಿರುವ ಶಂಕೆ ಇದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಕ್ತಸಿಕ್ತವಾಗಿ ಬಿದ್ದಿದ್ದ ಖಾದರ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಳಗಾನೂರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.
ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್ ಪಂದ್ಯದಲ್ಲಿ ಅಲ್ರೌಂಡ್ ಪ್ರದರ್ಶನದ ಫಲವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು…
ಧರ್ಮ ದಂಗಲ್ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…
ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…
ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.
ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…
ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.