Categories: ರಾಯಚೂರು

ಹಟ್ಟಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್- ಐದು ಮಂದಿಗೆ ಗಾಯ, ಓರ್ವ ಗಂಭೀರ

ರಾಯಚೂರು: ಹಟ್ಟಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್ ಆಗಿದ್ದು, ಒಟ್ಟು ಐದು ಮಂದಿಗೆ ಗಾಯಗಳಾಗಿದ್ದು, ಓರ್ವ ಕಾರ್ಮಿಕನ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ನಡೆದಿದೆ.

ಸುರಂಗ ಮಾರ್ಗದ ಕೆಲಸದ ವೇಳೆ ಏಕಾಏಕಿ ಏರ್ ಬ್ಲಾಸ್ಟ್ ಸಂಭವಿಸಿದೆ. ಈ ವೇಳೆ ಒಂದು ಬದಿಯಲ್ಲಿ ಮಣ್ಣು ಕುಸಿದಿದೆ. ಘಟನೆಯಲ್ಲಿ ಉಸಿರಾಟದ ಸಮಸ್ಯೆಯಿಂದ ನಿತ್ರಾಣಗೊಂಡು ಸುರಂಗದಲ್ಲೇ ಸಿಲುಕಿದ್ದ ಕಾರ್ಮಿಕರನ್ನ ಕೂಡಲೇ ರಕ್ಷಿಸಲಾಗಿದೆ.

ಐವರು ಕಾರ್ಮಿಕರಿಗೆ ಗಾಯಗಳಾಗಿದೆ. ಓರ್ವ ಕಾರ್ಮಿಕನ ಮೇಲೆ ಕಲ್ಲುಗಳು ಬಿದ್ದಿದ್ದು ಸ್ಥಿತಿ ಗಂಭೀರವಾಗಿದೆ. ಗಂಭೀರವಾಗಿ ಗಾಯಗೊಂಡ ಕಾರ್ಮಿಕ ಬಸವರಾಜ್‌ನನ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಹುಲಗಣ್ಣ, ಮಲ್ಲರಾವ್, ಪ್ರಭಾಕರ್, ಮೈಕಲ್, ಮರಿಸ್ವಾಮಿಗೆ ಗಾಯಗೊಂಡ ಕಾರ್ಮಿಕರು ಎಂಬ ಮಾಹಿತಿ ತಿಳಿದು ಬಂದಿದೆ.

 

 

Chaitra Kulal

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

47 mins ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

1 hour ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

2 hours ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

2 hours ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

2 hours ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

3 hours ago