News Karnataka Kannada
Sunday, April 28 2024
ರಾಯಚೂರು

ಕಾನ್ಸ್​​​ಟೇಬಲ್ ಮೇಲೆ ಜೆಡಿಎಸ್​​​ ಶಾಸಕಿ ಪುತ್ರನಿಂದ ಹಲ್ಲೆ​

ದೇವದುರ್ಗ ವಿಧಾನಸಭಾ ಕ್ಷೇತ್ರದ ಜೆಡಿಎಸ್ ​​ ಶಾಸಕಿ ಕರೆಮ್ಮ ನಾಯಕ್  ಅವರ ಪುತ್ರ ಸಂತೋಷ್, ಪಿಎ ಇಲಿಯಾಸ್ ಸೇರಿದಂತೆ ಎಂಟು ಜನರು ದೇವದುರ್ಗ ಪೊಲೀಸ್​ ಠಾಣೆಯ ಕರ್ತವ್ಯನಿರತ ಕಾನ್ಸ್​​​ಟೇಬಲ್​ ಮೇಲೆ ಹಲ್ಲೆ ಮಾಡಿದ್ದಾರೆ.
Photo Credit : News Kannada

ರಾಯಚೂರು: ದೇವದುರ್ಗ ವಿಧಾನಸಭಾ ಕ್ಷೇತ್ರದ ಜೆಡಿಎಸ್ ​​ ಶಾಸಕಿ ಕರೆಮ್ಮ ನಾಯಕ್  ಅವರ ಪುತ್ರ ಸಂತೋಷ್, ಪಿಎ ಇಲಿಯಾಸ್ ಸೇರಿದಂತೆ ಎಂಟು ಜನರು ದೇವದುರ್ಗ ಪೊಲೀಸ್​ ಠಾಣೆಯ ಕರ್ತವ್ಯನಿರತ ಕಾನ್ಸ್​​​ಟೇಬಲ್​ ಮೇಲೆ ಹಲ್ಲೆ ಮಾಡಿದ್ದಾರೆ.

ಹನುಮಂತರಾಯ ಹಲ್ಲೆಗೊಳಗಾದ ಕರ್ತವ್ಯನಿರತ ಕಾನ್ಸ್​​​ಟೇಬಲ್

ಕಾನ್ಸ್​ಟೇಬಲ್ ಹನುಮಂತರಾಯ ಅವರು ರವಿವಾರ (ಫೆ.11) ರಂದು ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್​ ಅನ್ನು​ ತಡೆದಿದ್ದರು.

ಟ್ರ್ಯಾಕ್ಟರ್​ ತಡೆಹಿಡಿದ ವಿಚಾರಕ್ಕೆ ಶಾಸಕಿ ಪುತ್ರ ಸಂತೋಷ್​​ ಕಾನ್ಸ್​ಟೇಬಲ್ ಹನುಮಂತರಾಯ ಅವರಿಗೆ ​ಕರೆ ಮಾಡಿ ಟ್ರ್ಯಾಕ್ಟರ್​ ಬಿಡುವಂತೆ ಹೇಳಿದ್ದಾರೆ. ಒತ್ತಡಕ್ಕೆ ಮಣಿಯದ ಕಾನ್ಸ್​ಟೇಬಲ್ ಹನುಮಂತರಾಯ ಅವರು ಟ್ರ್ಯಾಕ್ಟರ್​ ಅನ್ನು ಪೊಲೀಸ್​ ಠಾಣೆಗೆ ತಂದು ಪರಿಶೀಲನೆ ನಡೆಸಿದ್ದಾರೆ.

ಇದರಿಂದ ಆಕ್ರೋಶಗೊಂಡ ಶಾಸಕಿ ಪುತ್ರ ಸಂತೋಷ್​ ಕಾನ್ಸ್​ಟೇಬಲ್ ಹನುಮಂತರಾಯ ಅವರನ್ನು​ ದೇವದುರ್ಗ ಪ್ರವಾಸಿ ಮಂದಿರಕ್ಕೆ ಕರೆಸಿಕೊಂಡು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.

ಹಲ್ಲೆ ಮಾಡಿದ ಬಳಿಕ, ರಾಜಕೀಯ ಪ್ರಭಾವ ಬಳಸಿ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ್ದಾರೆ ಎನ್ನಲಾಗುತ್ತಿದೆ.

ಸದ್ಯ ಹಲ್ಲೆಗೊಳಗಾದ ಕಾನ್ಸ್​​​ಟೇಬಲ್​ ಹನುಮಂತರಾಯ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು