ರಾಯಚೂರು: ಸಾಲಬಾಧೆ ತಾಳಲಾರದೆ ತಾಲೂಕಿನ ಗೋನಾಳ ಗ್ರಾಮದ ರೈತ ಬಸವರಾಜ ಎಂಬುವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಐದು ಎಕರೆ ಜಮೀನಿನಲ್ಲಿ ತೊಗರಿ ಬಿತ್ತನೆ ಮಾಡಿದ್ದ ರೈತ ಲಕ್ಷಾಂತರ ರೂ. ಸಾಲ ಮಾಡಿದ್ದರು. ಸಾಲಬಾಧೆ ತಾಳಲಾರದೇ ಸೋಮವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ರಾಯಚೂರು: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.