ರಾಯಚೂರು: ಬಿಸಿಲಿನ ತಾಪದಿಂದ ಹೊಲದ ಕೆಲಸಕ್ಕೆ ತೆರಳಿದ್ದ ರೈತರೊಬ್ಬರು ಸಾವಿಗೀಡಾದ ಘಟನೆ ಜಾಲಿಬೆಂಚಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಹನುಮಂತು (45) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಹೊಲದಿಂದ ಬಣವೆ ಕೆಲಸ ಮುಗಿಸಿಕೊಂಡು ಮನೆಯ ಬಳಿ ಬಂದು ನೀರು ಕುಡಿಯುತ್ತಿದ್ದಂತೆ ಅವರು ಹಠಾತ್ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ರಾಯಚೂರಿನಲ್ಲಿ ಕಳೆದ 15 ವರ್ಷಗಳಲ್ಲೇ ಈ ಬಾರಿ ದಾಖಲೆಯ ಅತೀ ಹೆಚ್ಚು ತಾಪಮಾನ ದಾಖಲಾಗಿದೆ.