Categories: ರಾಯಚೂರು

ಮನೆ ಮುಂದೆ ಕುಳಿತಿದ್ದ ವೃದ್ಧನನ್ನು ಕಂಬಕ್ಕೆ ಕಟ್ಟಿಹಾಕಿ ಹಲ್ಲೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಚಿಕ್ಕಬೇರ್ಗಿ ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಮನೆ ಮುಂದೆ ಕುಳಿತಿದ್ದ ವೃದ್ಧನನ್ನು ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದಾರೆ.

ಈ ಪ್ರಕರಣ ಜ. 20 ರಂದು ಸಂಜೆ ವೇಳೆ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಚಿಕ್ಕಬೇರ್ಗಿ ಗ್ರಾಮದ ಲಿಂಗಪ್ಪ ಎಂಬ 53 ವರ್ಷದ ವೃದ್ಧ ಕೂಡ ಹೊಲದಿಂದ ಬಂದು ಎತ್ತುಗಳನ್ನ ಕಟ್ಟಿ ನಂತರ ಮನೆ ಬಳಿ ಕೂತುಕೊಂಡಿದ್ದ. ಈ ವೇಳೆ ಇದೇ ಗ್ರಾಮದ ಕೆಲವರು ಲಿಂಗಪ್ಪನ ಮೇಲೆ ಮುಗಿ ಬಿದ್ದಿದ್ದಾರೆ. ಲಿಂಗಪ್ಪನನ್ನ ಎಳೆದಾಡಿ ಹೊಡೆಯಲಾರಂಭಿಸಿದ್ದಾರೆ. ಆರೋಪಿಗಳು ಕಲ್ಲು, ದೊಣ್ಣೆಗಳಲ್ಲಿಂದ ಹಲ್ಲೆ ನಡೆಸಿದ್ದಾರೆ. ಅಷ್ಟಕ್ಕೆ ಸುಮ್ಮನಾಗದ ಆರೋಪಿಗಳು ಚಪ್ಪಲಿಯಿಂದ ಸಿಕ್ಕಸಿಕ್ಕಲ್ಲಿ ಹೊಡೆದಿದ್ದಾರೆ. ಆಗ ಲಿಂಗಪ್ಪ ನಾನೇನು ಅಂದಿಲ್ಲ ಬಿಟ್ ಬಿಡಿ ಅಂತ ಪರಿಪರಿಯಾಗಿ ಬೇಡಿಕೊಂಡರೂ ಆತನ ಮಾತು ಕೇಳಿಸಿಕೊಳ್ಳದ ಆರೋಪಿಗಳು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬಳಿಕ ಲಿಂಗಪ್ಪನನ್ನ ಹಗ್ಗದಿಂದ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದಾರೆ.

ನಂತರ ಲಿಂಗಪ್ಪ ಅವರನ್ನ ಸಿಂಧನೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಮಾಹಿತಿ ತಿಳಿದು ತುರ್ವಿಹಾಳ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದರು. ಹಲ್ಲೆಗೊಳಗಾದ ಲಿಂಗಣ್ಣ ಹಾಗೂ ಅದೇ ಗ್ರಾಮದ ಮತ್ತೊಬ್ಬ ವ್ಯಕ್ತಿ ಆರೋಪಿಗಳ ಸಂಬಂಧಿಕರಾಗಬೇಕಿದ್ದ ಮಹಿಳೆಯೊಬ್ಬರ ಬಗ್ಗೆ ಮಾತನಾಡುತ್ತಿದ್ದರಂತೆ. ಈ ವಿಚಾರ ತಿಳಿದು ಆರೋಪಿಗಳೆಲ್ಲಾ ಸೇರಿ ಲಿಂಗಪ್ಪನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಈ ಘಟನೆ ಹಿನ್ನಲೆ ತುರ್ವಿಹಾಳ ಪೊಲೀಸರು ಆರೋಪಿ ಹನಮಂತನನ್ನು ಬಂಧಿಸಿದ್ದು, ಇನ್ನುಳಿದ ಎಂಟು ಆರೋಪಿಗಳ ಬಂಧನವಾಗಬೇಕಿದೆ.

Gayathri SG

Recent Posts

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

9 mins ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

27 mins ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

41 mins ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

52 mins ago

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

1 hour ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

2 hours ago