ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೇರಾ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಬೈಕ್ ಸವಾರರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮೃತ ಬೈಕ್ ಸವಾರರ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಬಳಗಾನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.