ರಾಯಚೂರು: ತುಂಗಭದ್ರಾ ಎಡದಂಡೆ ಕಾಲುವೆಯ ಕಾಳಮಾಳದ ಬಳಿ ವಿದ್ಯಾರ್ಥಿಗಳು ಪಿಕ್ ನಿಕ್ ಗೆ ತೆರಳಿದ್ದಗ ಕಾಲುವೆಯ ಬಳಿ ಸೆಲ್ಫಿ ತೆಗೆದುಕೊಳ್ಳುವಾಗ ಜಾರಿ ಬಿದ್ದು ನೀರಿನಲ್ಲಿ ಮುಳುಗಿದ ಘಟನೆ ನಡೆದಿದೆ.
ಕಾಲುವೆಗೆ ಬಿದ್ದ ಇಬ್ಬರು ವಿದ್ಯಾರ್ಥಿಗಳ ಶವಗಳನ್ನು ಪೊಲೀಸರು, ಅಗ್ನಿಶಾಮಕ ದಳ ಮತ್ತು ತುರ್ತು ಸಿಬ್ಬಂದಿ ಹೊರತೆಗೆದಿದ್ದಾರೆ.
ಮೃತ ವಿದ್ಯಾರ್ಥಿಗಳನ್ನು ಸುಜಿತ್ ಮತ್ತು ವೈಭವ್ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಗಳಿಬ್ಬರೂ ವಿದ್ಯಾ ನಿಧಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಯಲ್ಲಿ ಕಲಿಯುತ್ತಿದ್ದರು.
ರಾಯಚೂರು ಗ್ರಾಮಾಂತರ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಕೈಗೊಂಡಿದ್ದರು. ಹೆಚ್ಚಿನ ತನಿಖೆ ನಡೆಯುತ್ತಿದೆ.