ರಾಯಚೂರು: ಕಸಬೆ ಕ್ಯಾಂಪ್ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಹಾಗೂ ಇನ್ನೋವಾ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಅತ್ತೆ, ಸೊಸೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಾಯಗೊಂಡ ಘಟನೆ ನಡೆದಿದೆ.
ಕಾರ್ನಲ್ಲಿದ್ದ ಮಾರಿಯಾ ಗೀತಾ (38) ಹಾಗೂ ಅಮಲ್ ಪಾಲ್ ಮೇರಿ (64) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರ್ನಲ್ಲಿ ಒಟ್ಟು ಏಳು ಜನ ಪ್ರಯಾಣಿಸುತ್ತಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಗಾಯಗೊಂಡ ಉಳಿದ ಐದು ಜನರನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ರಾಯಚೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.