News Karnataka Kannada
Sunday, April 21 2024
Cricket
ರಾಯಚೂರು

ಟಿಪ್ಪು ಸುಲ್ತಾನ್​ ಭಾವಚಿತ್ರಕ್ಕೆ ಚಪ್ಪಲಿ ಹಾರ: ಉದ್ವಿಗ್ನ ಪರಿಸ್ಥಿತಿ

ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ ಹಿನ್ನೆಲೆಯಲ್ಲಿ ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಉದ್ವಿಗ್ನ ಪರಸ್ಥಿತಿ ಏರ್ಪಟ್ಟಿದೆ. ರಸ್ತೆ ಸಂಚಾರ ಬಂದ್ ಮಾಡಿ, ಟೈಯರ್​ಗೆ ಬೆಂಕಿ ಹಚ್ಚಿ ಮುಸ್ಲಿಂ ಸಮುದಾಯದವರು ಪ್ರತಿಭಟನೆ ನಡೆಸುತ್ತಿದ್ದಾರೆ.
Photo Credit : News Kannada

ರಾಯಚೂರು: ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ ಹಿನ್ನೆಲೆಯಲ್ಲಿ ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಉದ್ವಿಗ್ನ ಪರಸ್ಥಿತಿ ಏರ್ಪಟ್ಟಿದೆ. ರಸ್ತೆ ಸಂಚಾರ ಬಂದ್ ಮಾಡಿ, ಟೈಯರ್​ಗೆ ಬೆಂಕಿ ಹಚ್ಚಿ ಮುಸ್ಲಿಂ ಸಮುದಾಯದವರು ಪ್ರತಿಭಟನೆ ನಡೆಸುತ್ತಿದ್ದಾರೆ.

ಸಿರವಾರ ಪಟ್ಟಣದ ಮಟನ್ ಮಾರ್ಕೆಟ್ ಬಳಿ ಇರುವ ಟಿಪ್ಪು ಸರ್ಕಲ್​ನಲ್ಲಿನ ಭಾವಚಿತ್ರಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ಪರಾರಿಯಾಗಿದ್ದಾರೆ. ಇದರಿಂದ ಆಕ್ರೋಶಗೊಂಡಿರುವ ಪ್ರತಿಭಟನಾಕಾರರು ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸುತ್ತಿದ್ದಾರೆ.

ಕಿಡಿಗೇಡಿಗಳು ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ರಾತ್ರಿ ವೇಳೆ ಚಪ್ಪಲಿ ಹಾರ ಹಾಕಿ ಸ್ಥಳದಿಂದ ಪರಾರಿಯಾಗಿದ್ದಾರೆ. ಇದನ್ನು ಬೆಳಗ್ಗೆ ನೋಡಿದ ಸಮುದಾಯದ ಮುಖಂಡರು ಆಕ್ರೋಶಗೊಂಡಿದ್ದರು. ಇದರಿಂದ ದೊಡ್ಡ ಪ್ರಮಾಣದಲ್ಲಿ ಸೇರಿರುವ ಸಮಾಜದವರು ಪ್ರತಿಭಟನೆ ಮಾಡುತ್ತಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮುಖಂಡರ ಜೊತೆ ಚರ್ಚೆ ಮಾಡಿ ಮನವೋಲಿಸಿದ್ದು ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವುದಾಗಿ ಹೇಳಿದ್ದಾರೆ. ಹೀಗಾಗಿ ಪ್ರತಿಭಟನೆ ಕೊಂಚ ಕಡಿಮೆಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು