Categories: ರಾಯಚೂರು

ಹಟ್ಟಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್: ಆರು ಜನ ಕಾರ್ಮಿಕರಿಗೆ ಗಾಯ

ರಾಯಚೂರು: ಲಿಂಗಸುಗೂರು  ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ  ಏರ್ ಬ್ಲಾಸ್ಟ್​ ಆಗಿ, ಆರು ಜನ ಕಾರ್ಮಿಕರು ಗಾಯಗೊಂಡಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದೆ.

ಗುರುವಾರ ಬೆಳಿಗ್ಗೆ ಕಾರ್ಮಿಕರು ಕೆಲಸಕ್ಕೆ ಹಾಜರಾಗಿದ್ದರು. ಸುರುಂಗದೊಳೆಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರಿಗೆ ಪೂರೈಸಲಾಗುತ್ತಿದ್ದ ಆಮ್ಲಜನಕದ ಗ್ಯಾಸ್ ಮಧ್ಯಾಹ್ನದ ಹೊತ್ತಿಗೆ ​ಬ್ಲಾಕ್​ ಆಗಿ, ಸ್ಫೋಟಗೊಂಡಿದೆ.

ಇದರಿಂದ ಏಕಾಏಕಿ ಒಂದು ಬದಿಯ ಮಣ್ಣು ಕುಸಿದಿದೆ. ಈ ವೇಳೆ ಉಸಿರಾಟದ ಸಮಸ್ಯೆಯಿಂದ ನಿತ್ರಾಣಗೊಂಡು ಕಾರ್ಮಿಕರು ಸುರಂಗದಲ್ಲೇ ಕುಸಿದಿದ್ದಾರೆ.

ಕೂಡಲೆ ಆರು ಜನ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ಆರು ಜನ ಕಾರ್ಮಿಕರ ಪೈಕಿ ಐವರನ್ನು ಹಟ್ಟಿ ಚಿನ್ನದ ಗಣಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಕಾರ್ಮಿಕನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹುಲಗಣ್ಣ, ಮಲ್ಲರಾವ್, ಪ್ರಭಾಕರ್, ಮೈಕಲ್, ಮರಿಸ್ವಾಮಿಗೆ ಗಾಯಗಳಾಗಿದ್ದು, ಹಟ್ಟಿ ಚಿನ್ನದ ಗಣಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಕಾರ್ಮಿಕ ಬಸವರಾಜ್​ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Ashika S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

4 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

4 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

4 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

5 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

5 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

6 hours ago