ರಾಯಚೂರು: ಜಿಲ್ಲೆಯಲ್ಲಿ ತಾಪಮಾನ ತೀವ್ರವಾಗಿ ಏರಿಕೆ ಕಂಡಿದ್ದು, ಮಾರ್ಚ್ ತಿಂಗಳ ಉಷ್ಣಾಂಶ 20 ವರ್ಷಗಳ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. 20 ವರ್ಷಗಳ ಅವಧಿಯಲ್ಲಿನ ಮಾರ್ಚ್ ತಿಂಗಳ ಜಿಲ್ಲೆಯ ಸರಾಸರಿ ತಾಪಮಾನ 0.5 ಡಿಗ್ರಿಯಷ್ಟು ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 41 ಡಿಗ್ರಿ ಸೆಲ್ಸಿಯಸ್ ತಾಪಮಾನ ಮುಂದುವರಿಕೆಯಾಗಿದೆ. ಮುಂಬರುವ ದಿನಗಳಲ್ಲಿ °ತಾಪಮಾನ 41 ಡಿಗ್ರಿ ಗಡಿ ದಾಟುವ ಸಾಧ್ಯತೆ ಇದೆ. ಪರಿಣಾಮವಾಗಿ ರಾಯಚೂರು ಜಿಲ್ಲೆಯ ಜನ ಬಿಸಿಲ ಬೇಗೆಯಲ್ಲಿ ಬೇಯುತ್ತಿರುವಂತಾಗಿದೆ.
ಜಿಲ್ಲೆಯ ಹಡಗನಹಾಳ್ ಹೋಬಳಿಯಲ್ಲಿ ಅತ್ಯಧಿಕ, ಅಂದರೆ 42.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಲಬುರಗಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ವಿಜಯಪುರ, ಬೀದರ್, ಗದಗ, ದಾವಣಗೆರೆ, ತುಮಕೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ನಿನ್ನೆ 41 ಡಿಗ್ರಿಯಿಂದ ನಿಂದ 42.6 ಡಿಗ್ರಿ ನಡುವೆ ಗರಿಷ್ಠ ತಾಪಮಾನ ದಾಖಲಾಗಿದೆ ಎಂದು ಇಲಾಖೆ ತಿಳಿಸಿದೆ.