Categories: ಕಲಬುರಗಿ

ಜಗತ್ತಿನ ಏಕೈಕ ಸುಳ್ಳು ಪ್ರಧಾನಿ ನರೇಂದ್ರ ಮೋದಿ -ಸಿ.ಎಮ್.ಸಿದ್ದರಾಮಯ್ಯ

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. 19 ವರ್ಷದಲ್ಲಿ ಮಾರುಕಟ್ಟೆಯಲ್ಲಿ ಸುಳ್ಳು ಮಾರಿಕೊಂಡು ಹೊರಟಿದ್ದಾರೆ. ಅವರನ್ನು ನಂಬಿ ಮತ ಹಾಕಬೇಡಿ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು.

ಕಲಬುರಗಿಯ ಖಾಸಗಿ ಹೊಟೇಲ್ ನಲ್ಲಿ ನಡೆದ‌ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು ಹಿಂದುಳಿದವರ ಮೀಸಲಾತಿ ಕಿತ್ತುಕೊಂಡು ಮುಸ್ಲಿಮರಿಗೆ ಕೊಡುತ್ತಾರೆ ಎನ್ನುವ ಮೋದಿ ಹೇಳಿಕೆ ರಾಜಕೀಯ ಪ್ರೇರಿತವಾಗಿದೆ.

ಮಹಿಳೆಯರ ಮಾಂಗಲ್ಯದ ಬಗ್ಗೆಯೂ ಕೂಡಾ ನೀಡಿದ ಅವರ ಹೇಳಿಕೆ ಹತಾಶೆಯಿಂದ ಕೂಡಿದೆ. ಅವರ ಹೇಳಿಕೆಗಳ ವಿರುದ್ದ ಕಾಂಗ್ರೆಸ್ ವತಿಯಿಂದ ಚುನಾವಣಾ ಆಯೋಗಕ್ಕೆ ದೂರು ದಾಖಲಿಸಲಾಗುವುದು ಎಂದು ಸಿಎಂ ಹೇಳಿದರು.

ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದವರಿಗೆ ನೀಡುವ ಮೀಸಲಾತಿಯನ್ನು ಯಾವ ಕಾರಣಕ್ಕೆ ಬಿಜೆಪಿ ಬೆಂಬಲಿಸಿಲ್ಲ. ಅಡ್ವಾಣಿ ಮೀಸಲಾತಿ ವಿರುದ್ದ ರಥಯಾತ್ರೆ‌ ಕೈಗೊಂಡಿದ್ದರು. ಬಿಜೆಪಿ ಎಂಪಿ ರಾಮಾಜೋಯಿಸ್ ಮಹಿಳೆಯರಿಗೆ ಹಾಗೂ ಹಿಂದುಳಿದ ವರ್ಗಗಳಿಗೆ ನೀಡುವ ಮೀಸಲಾತಿ‌ ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಮೀಸಲಾತಿ ನೀಡಿದನ್ನು ಸುಪ್ರಿಂ ಕೋರ್ಟ್ ಎತ್ತಿ ಹಿಡಿದಿತ್ತು ಎಂದು ನೆನಪಿಸಿಕೊಂಡರು.

ಸಂವಿಧಾನದ ಆರ್ಟಿಕಲ್ 15 ಹಾಗೂ 16 ಪ್ರಕಾರ ಎಲ್ಲರೂ ಸಮಾನರು. ಆದರೆ ಆರ್ಟಿಕಲ್ 14 ರ ಪ್ರಕಾರ ಸಾಮಾಜಿಕವಾಗಿ ಹಾಗೂ‌ ಶೈಕ್ಷಣಿಕವಾಗಿಹಿಂದುಳಿದವರಿಗೆ ಮೀಸಲಾತಿ ನೀಡಬಹುದು. ಮಂಡಲ್ ಆಯೋಗದ ವರದಿಯಲ್ಲಿ ಇದನ್ನೇ ಹೇಳಲಾಗಿದೆ. ಹಿಂದುಳಿದ ವರ್ಗಗಳ ಆಯೋಗ ಇರಬೇಕು ಎಂದು ಹೇಳಿದೆ. ಆದರೆ ವರದಿ ವಿರುದ್ದ ಬಿಜೆಪಿ ವಿದ್ಯಾರ್ಥಿಗಳನ್ನು ಪ್ರಚೋದಿಸಿತ್ತು. ಮೀಸಲಾತಿ ವಿಚಾರದಲ್ಲಿ ಸುಪ್ರಿಂ ಕೋರ್ಟ್ ಕೂಡಾ ಒಪ್ಪಿಕೊಂಡಿದ್ದು ಅದು ಶೇ 50% ಮೀರಬಾರದು ಎಂದು‌ ನಿಗದಿಪಡಿಸಿದೆ. ಆದರೆ, ಮೋದಿ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ 10% ಮೀಸಲಾತಿ ಕೊಟ್ಟಿದೆ. ಜೊತೆಗೆ ಬೊಮ್ಮಾಯಿ ಸರ್ಕಾರ ಅಧಿಕಾರದಲ್ಲಿದ್ದಾಗ‌ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲಾಗಿದೆ. ಎನ್ನುವ ಕಾರಣ ನೀಡಿ, ಮುಸಲ್ಮಾನರಿಗೆ ಕೊಟ್ಟಿದ್ದ ಮೀಸಲಾತಿಯನ್ನು ರದ್ದುಗೊಳಿಸಿದೆ.‌ಈ ಕುರಿತು ಸುಪ್ರಿಂ ಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿದೆ ಎಂದು ಸಿಎಂ ಹೇಳಿದರು.

Nisarga K

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

2 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

2 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

2 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

2 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

4 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

4 hours ago