Categories: ಕಲಬುರಗಿ

ವಿದ್ಯಾರ್ಥಿಗಳ ಹಣ ವಾಪಸ್ ನೀಡಿದ ಕಲಬುರಗಿ ಎಂಆರ್​ಎಂಸಿ ಮೆಡಿಕಲ್ ಕಾಲೇಜು

ಕಲಬುರಗಿ:  ಮಹಾದೇವಪ್ಪ ರಾಂಪೂರೆ ಮೆಡಿಕಲ್ ಕಾಲೇಜು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯಡಿಯಲ್ಲಿ ಬರುವ ಈ ಮೆಡಿಕಲ್ ಕಾಲೇಜಿನಲ್ಲಿ ನೂರಾರು ಜನ ವಿದ್ಯಾರ್ಥಿಗಳು ತಮ್ಮ ಕನಸ್ಸುಗಳನ್ನ ಕಟ್ಟಿಕೊಂಡು ಮೆಡಿಕಲ್ ಓದುತ್ತಿದ್ದಾರೆ. ಅದರಂತೆ ಪ್ರತಿ ತಿಂಗಳು ಪಿಜಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸರ್ಕಾರದಿಂದ 45 ಸಾವಿರದಿಂದ 55 ಸಾವಿರ ರೂಪಾಯಿ ಶಿಷ್ಯ ವೇತನವನ್ನ ನೀಡಲಾಗುತ್ತದೆ. ಆದರೆ, ಕಾಲೇಜು ಆಡಳಿತ ಮಂಡಳಿಯು ವಿದ್ಯಾರ್ಥಿಗಳಿಂದ ಬ್ಲ್ಯಾಂಕ್ ಚೆಕ್ ಮೇಲೆ ಸಹಿ ಮಾಡಿಸಿಕೊಂಡು ಅವರ ಅಕೌಂಟ್‌ನಿಂದ ಕೋಟ್ಯಾಂತರ ರೂಪಾಯಿ ಶಿಷ್ಯವೇತನ ಹಣವನ್ನ ಕೊಳ್ಳೆ ಹೊಡೆದಿತ್ತು. ಈ‌ ಬಗ್ಗೆ ಟಿವಿ9 ದಾಖಲೆ ಸಮೇತ ನಿರಂತರವಾಗಿ ವರದಿಯನ್ನ ಪ್ರಸಾರ ಮಾಡಿತ್ತು. ಇದೀಗ ಎಮ್‌ಆರ್‌ಎಮ್‌ಸಿ ಮೆಡಿಕಲ್ ಕಾಲೇಜು, ಪಿಜಿ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಹಣವನ್ನ ವಾಪಾಸ್​ ‌ಮಾಡಿದೆ.

ನಾಲ್ಕು ತಿಂಗಳ ಶಿಷ್ಯ ವೇತನ ಮೊತ್ತವಾದ ನಾಲ್ಕು ಕೋಟಿ ಸ್ಟೈಫಂಡ್ ಹಣವನ್ನ ಬಿಡುಗಡೆ ಮಾಡಿದ್ದು, ನಿನ್ನೆ(ಮಾ.01) ಒಂದೇ ದಿನ ಬ್ಯಾಂಕ್ ‌ಮೂಲಕ‌ ವಿದ್ಯಾರ್ಥಿಗಳ ಅಕೌಂಟ್‌ಗೆ 2.25 ಕೋಟಿ ರೂ. ಹಣವನ್ನ ಜಮಾ ಮಾಡಿದ್ದಾರೆ. ಈ ಹಿನ್ನಲೆ ವಿದ್ಯಾರ್ಥಿಗಳು ನಿಟ್ಟುಸಿರು ಬಿಟ್ಟಿದ್ದು, ಟಿವಿ9 ವರದಿಗೆ ಸಂದ ಜಯ ಎಂದು ಧನ್ಯವಾದ ಹೇಳುತ್ತಿದ್ದಾರೆ.ಇನ್ನು ಎಮ್‌ಆರ್‌ಎಮ್‌ಸಿ ಮೆಡಿಕಲ್ ಕಾಲೇಜು ಒಂದೇ ವರ್ಷದಲ್ಲಿ 300 ಕ್ಕೂ ಅಧಿಕ ಪಿಜಿ ವಿದ್ಯಾರ್ಥಿಗಳ 81 ಕೋಟಿ ರೂಪಾಯಿ ಶಿಷ್ಯವೇತನ ಹಣವನ್ನ ಗುಳುಂ ಮಾಡಿತ್ತು.

ಈ ಬಗ್ಗೆ ಟಿರ್ವಿ ವರದಿ ಮಾಡ್ತಿದ್ದಂತೆ, ವಿದ್ಯಾರ್ಥಿಗಳು ಆಡಿಯೋ ಬಾಂಬ್ ಸಿಡಿಸಿ ಕಾಲೇಜು ಆಡಳಿತ ಮಂಡಳಿಯ ವಿರುದ್ಧ ವಾರಗಟ್ಟಲೇ ನಿರಂತರ ಪ್ರತಿಭಟನೆ ಮಾಡಿದ್ದರು. ಜೊತೆಗೆ ಅಕೌಂಟ್‌ನಿಂದ ಹಣ ಡ್ರಾ ಆದ ಬಗ್ಗೆ ವಿದ್ಯಾರ್ಥಿಗಳು ಸೈಬರ್ ಕ್ರೈಂ ಪೊಲೀಸರಿಗೆ ದೂರನ್ನ ಸಹ‌ ನೀಡಿದ್ದರು.ಸಧ್ಯ ಆತಂಕದಿಂದ ವಿದ್ಯಾರ್ಥಿಗಳಿಗೆ ಹಣವನ್ನ ವಾಪಾಸು ಮಾಡಿದ್ದು, ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಂತಾಗಿದೆ. ಇನ್ನು ಈ ಬಗ್ಗೆ ಕಲಬುರಗಿಯಲ್ಲಿ ಪ್ರತಿಕ್ರಿಯಿಸಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ ಶರಣಪ್ರಕಾಶ್ ಪಾಟೀಲ್‌, ‘ಸ್ಟೈಫಂಡ್ ಹಗರಣದ ಬಗ್ಗೆ ನನ್ನ ಗಮನಕ್ಕೆ ಬಂದಿದೆ.

ಆ ರೀತಿ ಏನಾದರೂ ಆದರೆ, ತನಿಖೆಯಾಗುತ್ತದೆ. ಇನ್ನು ಎಲ್ಲಾ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಗೆ ಸ್ಟೈಫಂಡ್ ಕೊಡುವ ಬಗ್ಗೆ ಖಡಕ್ ಸೂಚನೆ ನೀಡುವುದಾಗಿ ಸಚಿವ ಪಾಟೀಲ್‌ ಸ್ಪಷ್ಟಪಡಿಸಿದ್ದಾರೆ. ಅದೆನೇ ‌ಇರಲಿ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಿಗಬೇಕಾದ ಸ್ಟೈಫಂಡ್ ಹಣವನ್ನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಗೋಲ್‌ಮಾಲ್ ಮಾಡಿ ಸಿಕ್ಕಿಬಿದ್ದಿರೋದು ಸಾಬೀತಾಗಿದ್ದು, ಇನ್ನಾದರೂ ವಿದ್ಯಾರ್ಥಿಗಳ ಹಿತವನ್ನ ಕಾಪಾಡುವ ಕೆಲಸ ಮಾಡಲಿ ಎನ್ನುವುದು ನಮ್ಮ ಆಶಯ.

Nisarga K

Recent Posts

ಆರು ತಿಂಗಳ ಬಳಿಕ ಭಕ್ತರಿಗೆ ದರ್ಶನ ನೀಡಿದ ಬದರಿನಾಥ

ಉತ್ತರಾಕಾಂಡ ಚಮೋಲಿಯಲ್ಲಿರುವ ಬದರಿನಾಥ ಬಾಗಿಲನ್ನು ಇಂದು(ಬಾನುವಾರ) ಬೆಳಿಗ್ಗೆ 6 ಗಂಟೆಗೆ ತೆರೆಯಲಾಯಿತು. ಈ ವೇಳೆ ವೇದ ಘೋಷಗಳು ಮತ್ತು ನೆರೆದಿದ್ದ…

14 mins ago

ಬಸವ ಭವನದ ಜಮೀನಿಗೆ ಪೂಜೆ ಮತ್ತು ಷಟಸ್ಥಲ ಧ್ವಜಾರೋಹಣ

ನಗರದ ನಾವದಗೇರೆ ಸಮೀಪದ ಸರ್ವೇ ನಂ. 60ರಲ್ಲಿ ಜಿಲ್ಲಾಡಳಿತದಿಂದ ಮೀಸಲಿಟ್ಟಿರುವ ಒಂದು ಎಕರೆ ಹತ್ತು ಗುಂಟೆ ಜಮೀನಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ…

41 mins ago

ಸಂಸ್ಕಾರದ ತೊಟ್ಟಿಲು ಸರಸ್ವತಿ ಶಾಲೆ : ಹಿರಿಯ ಶಿಕ್ಷಕಿ

ನಗರದ ಸರಸ್ವತಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಶನಿವಾರ ಗುರುವಂದನಾ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವನ್ನು ಬಹಳ…

52 mins ago

ತಮಿಳು ನಟ ಸಿಂಭು ಅವರನ್ನು ಚಿತ್ರರಂಗದಿಂದ ನಿಷೇಧಿಸುವಂತೆ ನಿರ್ದೇಶಕ ಒತ್ತಾಯ

ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಭು ಅವರ ವಿರುದ್ಧ ಇದೀಗ ನಿರ್ದೇಶಕ ದೂರು ನೀಡಿದ್ದು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು…

1 hour ago

ಆಫೀಸ್‌ನಲ್ಲಿ ಒತ್ತಡಕ್ಕೆ ಒಳಗಾಗ್ತಿದ್ದೀರಾ : ಹಾಗಾದ್ರೆ ಇಲ್ಲಿದೆ ಟಿಪ್ಸ್‌

ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…

2 hours ago

ಇಂದು 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…

2 hours ago