News Karnataka Kannada
Monday, April 29 2024
ವಿಜಯನಗರ

ಕೆ.ಜೆ.ಹಳ್ಳಿ ಪ್ರಕರಣ ಸರಿಯಾಗಿ ನಿರ್ವಹಿಸದ ಕಾರಣ ಹುಬ್ಬಳ್ಳಿ ಘಟನೆ ನಡೆದಿದೆ; ಯತ್ನಾಳ

If you can, B.K. Take action against Hariprasad: MLA Yatnal
Photo Credit :

ಹೊಸಪೇಟೆ (ವಿಜಯನಗರ) : ‘ಕೆ.ಜೆ.ಹಳ್ಳಿ, ಡಿ.ಜೆ. ಹಳ್ಳಿ ಘಟನೆಯನ್ನು ಸರಿಯಾಗಿ ನಿರ್ವಹಣೆ ಮಾಡದ ಕಾರಣ ಹುಬ್ಬಳ್ಳಿಯಲ್ಲಿ ಈ ಘಟನೆ ನಡೆದಿದೆ. ಆ ಶಕ್ತಿಗಳಿಗೆ ಮತ್ತಷ್ಟು ಶಕ್ತಿ ಬಂದಿದೆ. ರಾಜ್ಯ ಸರ್ಕಾರ, ಗೃಹಸಚಿವರು ಗಟ್ಟಿತನ ತೋರಿಸಿ, ಅವರ ಮನೆ ಹೊಕ್ಕು ಹೊರತರಬೇಕು. ಅವರನ್ನು ಮುಗಿಸಲು ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದರು.

ಈ ರೀತಿಯ ಘಟನೆ ಕರ್ನಾಟಕದಲ್ಲಿ ಮರುಕಳಿಸಲು ಬಿಡಬಾರದು. ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಯಾರು ಗೂಂಡಾಗಳು, ದೇಶದ್ರೋಹಿಗಳಿದ್ದಾರೆ. ಪೊಲೀಸರು ಹಾಗೂ ಪೊಲೀಸ್‌ ಠಾಣೆ ಮೇಲೆ ದಾಳಿ ನಡೆಸಿದ್ದಾರೆ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಕರ್ನಾಟಕದಲ್ಲಿ ಕೆಟ್ಟ ಚಾಳಿ ಪ್ರಾರಂಭವಾಗಿದೆ. ಅವರ ಶಕ್ತಿ ಕುಗ್ಗಿಸಲು ಮುಖ್ಯಮಂತ್ರಿ, ಗೃಹಸಚಿವರು ಕ್ರಮ ಕೈಗೊಳ್ಳಬೇಕು ಎಂದು ಭಾನುವಾರ ಇಲ್ಲಿ ಒತ್ತಾಯಿಸಿದರು.

ಮಸೀದಿಯ ಚಿತ್ರದ‌ ಮೇಲೆ ಭಗವಾಧ್ವಜ ಹಾರಿಸಿದ ಚಿತ್ರ ಎಡಿಟ್‌ ಮಾಡಿ ಯುವಕನೊಬ್ಬ ಸ್ಟೇಟಸ್‌ ಹಾಕಿಕೊಂಡಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆ ಸಮೀಪದಲ್ಲಿಯೇ ಕಲ್ಲುತೂರಾಟ ನಡೆದಿದೆ. ಸಮೀಪದ ಆಸ್ಪತ್ರೆ ಮೇಲೂ ದಾಳಿಯಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ, ಅಶ್ರುವಾಯು ಪ್ರಯೋಗಿಸಿದ್ದಾರೆ. ಘಟನೆಯಲ್ಲಿ ಪೊಲೀಸ್‌ ವಾಹನಗಳು ಜಖಂಗೊಂಡಿವೆ. ಶನಿವಾರ ತಡರಾತ್ರಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು